ಪಡಿತರ ಅಂಗಡಿಗಳ ವೇಳಾಪಟ್ಟಿ ಬದಲಾವಣೆ: ಸಚಿವರ ಕ್ರಮಕ್ಕೆ ಹುಡೇಜಾಲಿ ಅಭಿನಂದನೆ
Change in ration shop timings: Hudejali commends Minister's move
ಕೊಪ್ಪಳ, ಸೆ.17: ರಾಜ್ಯದ ಬಡವರು, ದಿನಗೂಲಿ ನೌಕರರು ಹಾಗೂ ಶ್ರಮಿಕ ವರ್ಗದವರ ಅನುಕೂಲಕ್ಕಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನ್ಯಾಯಬೆಲೆ ಅಂಗಡಿಗಳ (ಪಡಿತರ ಅಂಗಡಿಗಳ) ಕಾರ್ಯನಿರ್ವಹಣಾ ವೇಳಾಪಟ್ಟಿಯನ್ನು ಪರಿಷ್ಕರಿಸಿರುವ ಕ್ರಮಕ್ಕೆ ಹಿರಿಯ ಪಡಿತರ ವಿತರಕ ಹಾಗೂ ಕೊಪ್ಪಳ ಜಿಲ್ಲೆಯ ರಂಗಭೂಮಿ ಕಲಾವಿದ ಹಾಲಯ್ಯ ಹುಡೆಜಾಲಿ ಅಭಿನಂದನೆ ಸಲ್ಲಿಸಿದ್ದಾರೆ.
2026ರ ಅಕ್ಟೋಬರ್ 1ರಿಂದ ಪರಿಷ್ಕೃತ ವೇಳಾಪಟ್ಟಿ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಆಹಾರ ಇಲಾಖೆಯ ಸಚಿವರು ಹಾಗೂ ಇಲಾಖೆಯ ಆಯುಕ್ತರು ಕೈಗೊಂಡಿರುವ ಈ ಕ್ರಮದಿಂದ ಪಡಿತರ ಗ್ರಾಹಕರು ಹಾಗೂ ಅಂಗಡಿ ಮಾಲೀಕರಿಗೂ ಅನುಕೂಲವಾಗಲಿದೆ ಎಂದು ಹುಡೆಜಾಲಿ ತಿಳಿಸಿದ್ದಾರೆ. ಈ ಕುರಿತು ಸಚಿವರು, ಇಲಾಖೆಯ ಆಯುಕ್ತರು ಹಾಗೂ ಪಡಿತರ ಚೀಟಿ ವಿತರಕರ ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಅವರಿಗೆ ಗ್ರಾಹಕರು ಮತ್ತು ಪಡಿತರ ವಿತರಕರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ದಿನವೀಡೀ ಕಷ್ಟಪಟ್ಟು ದುಡಿಯುವ ದಿನಗೂಲಿ ಕಾರ್ಮಿಕರು, ಆಟೋ ಚಾಲಕರು ಹಾಗೂ ಕಟ್ಟಡ ಕಾರ್ಮಿಕರು ಪಡಿತರ ಪಡೆಯಲು ತಮ್ಮ ಕೆಲಸವನ್ನು ಬಿಟ್ಟು ಸರದಿಯಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳ ಕಾರ್ಯನಿರ್ವಹಣಾ ಸಮಯವನ್ನು ಬದಲಾಯಿಸಿರುವುದು ಮಹತ್ವದ ನಿರ್ಧಾರವಾಗಿದೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 