ಚನ್ನಾಪುರ ಗ್ರಾಮ; ನರೇಗಾ ಯೋಜನೆ ಕಾಮಗಾರಿ ಪರೀಶೀಲನೆ
Channapur Village; Inspection of Narega project work
ಲೋಕದರ್ಶನ ವರದಿ
ಹುಬ್ಬಳ್ಳಿ 10: ಇಂದು ಚನ್ನಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಕೆರೆ,ಕಾಲುವೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯ ಸ್ಥಳಕ್ಕೆ ನರೇಗಾ ಯೋಜನೆಯ ಸಹಾಯಕ ನಿರ್ದೇಶಕರಾದ ಸದಾನಂದ ಅಮರಾಪುರ ಅವರು ಭೇಟಿ ನೀಡಿ ಪರೀಶೀಲಿಸಿದರು. ಈ ಸಂದರ್ಭದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ವಿಬಿಜಿ ರಾಮಜಿ ಯೋಜನೆಯ ಹೊಸ ನಿಯಮಗಳು ಹಾಗೂ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಲಾಯಿತು. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಯಿತು. ಅಲ್ಲದೇ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.
ಇಂತಹ ಕಾಮಗಾರಿಗಳು ಗ್ರಾಮೀಣ ಕಾರ್ಮಿಕರಿಗೆ ಉದ್ಯೋಗಾವಕಾಶ ಒದಗಿಸುವುದರ ಜೊತೆಗೆ ಜಲ ಸಂರಕ್ಷಣೆ, ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಳ ಹಾಗೂ ಗ್ರಾಮೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತವೆ. ಕಾಮಗಾರಿಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಇಲಾಖೆಯಿಂದ ನಿರಂತರವಾಗಿ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು. ತಾಲೂಕು ಪಂಚಾಯತ ಅಧಿಕಾರಿಗಳು, ಗ್ರಾಮ ಪಂಚಾಯತಿ ಸಿಬ್ಬಂದಿ, ಕಾರ್ಮಿಕರು ಹಾಜರಿದ್ದರು.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 