ಚಾರ್ಮಾಡಿ ಘಾಟ್ ರಸ್ತೆ ದುರಸ್ತಿ: ಇಂದಿನಿಂದ ಭಾರಿ ವಾಹನ ಸಂಚಾರ ನಿಷೇಧ
ಮಂಗಳೂರು, ಡಿ28, ಚಾರ್ಮಾಡಿ ಘಾಟ್ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಇಂದಿನಿಂದ ಭಾರಿ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ.ಆದರೆ ಮಿನಿ ವಾಹನಗಳ ಸಂಚಾರಕ್ಕೆ ಯಾವುದೆ ತೊಂದರೆಯಿಲ್ಲ ಎಂದು
ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹೇಳಿದ್ದಾರೆ. ಕಾರು,
ಮಿನಿ ಟೆಂಪೋ ಹಾಗೂ ಮಿನಿ ಕೆ.ಎಸ್.ಆರ್.ಟಿ.ಸಿ ಬಸ್ಗಳಿಗೆ ಮಾತ್ರ ಈ ರಸ್ತೆಯಲ್ಲಿ ಸಂಚರಿಸುವ ಅವಕಾಶ
ಕಲ್ಪಿಸಲಾಗಿದೆ. ಭಾರಿ ವಾಹನಗಳಾದ ಟ್ಯಾಂಕರ್, ರಾಜಹಂಸ
ಬಸ್ ಸೇರಿದಂತೆ ಇತರೆ ವಾಹನಗಳ ಸಂಚಾರ ನಿಷೇಧ ಮಾಡಲಾಗಿದ್ದು ಮುಂದಿನ ಆದೇಶದವರೆಗೂ ಈ ವ್ಯವಸ್ಥೆ ಜಾರಿಯಲ್ಲಿದೆ.ಮುಂದಿನ
ಆದೇಶದವರೆಗೂ ಪರ್ಯಾಯ ರಸ್ತೆ ಮೂಲಕ ತೆರಳಲು ಪ್ರಯಾಣಿಕರಿಗೆ ಸೂಚನೆ ನೀಡಲಾಗಿದೆ. ಕಾರ್ಕಳ-ಸಂಸೆ-ಕುದುರೆಮುಖ
ರಸ್ತೆ ಮತ್ತು ಶಿರಾಡಿ ರಸ್ತೆಗ ಮೂಲಕ ಪ್ರಯಾಣಿಕರು ತೆರಳಲು ಅವಕಾಶ ನೀಡಲಾಗಿದೆ. ಚಾರ್ಮಾಡಿ ಘಾಟ್ ಮಂಗಳೂರು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿದೆ.
ಈ ವರ್ಷ ಮಲೆನಾಡು ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಪದೇ ಪದೇ ಭೂ ಕುಸಿತ
ಉಂಟಾಗಿತ್ತು. ಹೀಗಾಗಿ ಆಗಸ್ಟ್ ತಿಂಗಳಿಂದ ಚಾರ್ಮಾಡಿ ಘಾಟ್ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು.
ಇದೀಗ ಸಾರ್ವಜನಿಕರ ಹಿತದೃಷ್ಟಿಯಿಂದ ಇಂದಿನಿಂದ ಮಿನಿಲಘು ವಾಹನಗಳ ಸಂಚಾರ ಆರಂಭಕ್ಕೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 