ಕಾಗವಾಡ

7 ನೇ ವೇತನ ಆಯೋಗೆ ಜಾರಿಗೆ ಹರ್ಷ

7 ನೇ ವೇತನ ಆಯೋಗೆ ಜಾರಿಗೆ ಹರ್ಷ

ಕಾಗವಾಡ17 : ಸರ್ಕಾರಿ ನೌಕರರ ಮಹತ್ವದ ಬೇಡಿಕೆಯಾದ 7ನೇ ವೇತನ ಆಯೋಗ ಜಾರಿಗೆ ಮಾಡಿರುವುದಕ್ಕೆ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ ಸದಸ್ಯರು ಹರ್ಷ ವ್ಯಕ್ತಪಡಿಸಿದ್ದಾರೆ. 

ವರದಿ ಜಾರಿಗೆ ಕಾರಣಿಕರ್ತರಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಶಿಕ್ಷಣ ಸಚಿವ ಮಧು ಬಂಗಾರ​‍್ಪ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಕಾಗವಾಡ ಶಾಸಕ ಹಾಗೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜು ಕಾಗೆ ಅವರಿಗೆ ಸಚಿವ ಸಂಪುಟ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ. 

ವೇತನ ಆಯೋಗ ಜಾರಿಗೆ ನಿರಂತರ ಶ್ರಮಿಸಿದ ಸಂಘದ ಅಧ್ಯಕ್ಷ ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ, ಜಿಲ್ಲಾಧ್ಯಕ್ಷರಾದ ಸಿದ್ರಾಮ ಲೋಕನ್ನವರ ಹಾಗೂ ಇತರೆ ಪದಾಧಿಕಾರಿಗಳಿಗೆ ತಾಲೂಕು ಅಧ್ಯಕ್ಷ ಎಂ.ಜಿ. ಸಂಕಪಾಳ, ಪ್ರಧಾನ ಕಾರ್ಯದರ್ಶಿ ಕೆ.ಎನ್‌. ಗಾಣಿಗೇರ ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ. 


ಸುದ್ದಿ ಓದಿ