ಯಲಬುರ್ಗಾದಲ್ಲಿ ಸರಳವಾಗಿ ಚನ್ನಮ್ಮ ಜಯಂತಿ ಆಚರಣೆ
ಯಲಬುರ್ಗಾ: ಪಟ್ಟಣದಲ್ಲಿ ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ವೀರರಾಣಿ ಚನ್ನಮ್ಮ ಅವರ ಧೈರ್ಯ, ಸಾಹಸ, ದೇಶಪ್ರೇಮ ಮತ್ತು ಬ್ರಿಟಿಷರ ವಿರುದ್ಧದ ಹೋರಾಟವನ್ನು ಸ್ಮರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಅವರು ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ವೀರ ಮಹಿಳೆಯಾಗಿದ್ದು, ಅವರ ಆದರ್ಶಗಳು ಇಂದಿನ ಯುವಜನತೆಗೆ ಸ್ಫೂರ್ತಿಯಾಗಿವೆ ಎಂದು ಈ ವೇಳೆ ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.