ಇಂಡಿ

ಇಂಡಿ ತಾಲ್ಲೂಕಿನ್ಯಾದಂತ ಚೆನ್ನಮ್ಮ ಜಯಂತಿ ಆಚರಣೆ

ಇಂಡಿ ತಾಲ್ಲೂಕಿನ್ಯಾದಂತ ಚೆನ್ನಮ್ಮ ಜಯಂತಿ ಆಚರಣೆ

 ಇಂಡಿ 23: ತಾಲ್ಲೂಕಿನ ಮಿನಿ ವಿಧಾನಸೌಧದ ಆವರಣದಲ್ಲಿ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತೋತ್ಸವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು. ಕಛೇರಿ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಅವರು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸಿ ಮಾತನಾಡಿದ ಅವರು ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯರಲ್ಲಿ ಕಿತ್ತೂರು ಚೆನ್ನಮ್ಮರ ಹೆಸರು ಅಗ್ರಗಣ್ಯವಾದದ್ದು. "ನಮ್ಮ ದೇಶದ ಸ್ವಾತಂತ್ರ್ಯವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ" ಎಂಬ ದಿಟ್ಟ ಹೆಜ್ಜೆಯೊಂದಿಗೆ ಬ್ರಿಟಿಷರ ದ್ವಿತೀಯ ದತ್ತು ನೀತಿಯನ್ನು ವಿರೋಧಿಸಿ, ಸ್ವದೇಶಿ ಸಂಸ್ಥಾನದ ರಕ್ಷಣೆಗಾಗಿ ಹೋರಾಡಿದ ವೀರ ವನಿತೆಯ ಈಕೆಯ ಜಯಂತಿಯು ಕನ್ನಡಿಗರ ಸ್ವಾಭಿಮಾನದ ಹಾಗೂ ದೇಶಪ್ರೇಮದ ಸಂಕೇತವಾಗಿದೆ. ಇಂಡಿ ತಹಶೀಲ್ದಾರ ನಾಗೇಂದ್ರ ಕೊಳಶೆಟ್ಟಿ ಅವರು ಮಾತನಾಡಿ ಪ್ರತಿವರ್ಷ ಅಕ್ಟೋಬರ್ 23 ರಂದು ವೀರ ರಾಣಿ ಚೆನ್ನಮ್ಮ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಗುವುದು  ಈ ದಿನವು, ಧೈರ್ಯ, ಶೌರ್ಯ ಮತ್ತು ದೇಶಾಭಿಮಾನದ ಪ್ರತೀಕವಾದ ಕಿತ್ತೂರು ಚೆನ್ನಮ್ಮರ ಐತಿಹಾಸಿಕ ಹೋರಾಟವನ್ನು ಸ್ಮರಿಸಿಕೊಳ್ಳಲು ಮತ್ತು ಇಂದಿನ ಯುವ ಪೀಳಿಗೆಗೆ ಅವರ ಆದರ್ಶಗಳನ್ನು ತಿಳಿಸಿಕೊಡಲು ಅತ್ಯಂತ ಮಹತ್ವವಾದ ದಿನವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾದೇವಪ್ಪ ಏವೂರ, ಬಸವರಾಜ ಏವೂರ ಬಳ್ಳೊಳ್ಳಿ ಕಂದಾಯ ನೀರೀಕ್ಷಕರಾದ ಪಿ ಎಸ್ ಕೊಡವನರ ಹಾಗೂ ಇಂಡಿ ಪಂಚಮಸಾಲಿ ಸಂಘದ ಅಧ್ಯಕ್ಷರಾದ ವಿ ಎಚ್ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಹಾಗೂ ಇಂಡಿಯ ಎಸ್‌.ಎಸ್‌.ವಿ.ವಿ. ಸಂಘದ ಜಿ.ಆರ್‌. ಗಾಂಧಿ ಕಲಾ,ವೈ.ಎ. ಪಾಟೀಲ ವಾಣಿಜ್ಯ ಹಾಗೂ ಎಂ.ಪಿ. ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಕನ್ನಡ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅರ್ಥಪೂರ್ಣವಾಗಿ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ವಿ ಎಂ ಕೋರವಾರ ಅವರು ಬ್ರಿಟಿಷರ ವಿರುದ್ಧ ಹೋರಾಡಿ ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಪ್ರೇರಣೆಯಾದ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಸ್ವಾಭಿಮಾನದ ಬದುಕು ಇಂದಿನ ಯುವಜನತೆಗೆ ಸದಾ ಸ್ಫೂರ್ತಿಯಾಗಿದೆ ಎಂದು ಡಾ. ವಿ.ಎ. ಕೋರವಾರ್ ಹೇಳಿದರು. ಹಾಗೂ ಇಂಡಿ ಶಾಲೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮ  ಜಯಂತಿಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯ ಗುರುಗಳಾದ  ಎಸ್‌. ಜಿ. ಜೋತಗೊಂಡ ಅವರು ವಿದ್ಯಾರ್ಥಿಗಳಿಗೆ ಕಿತ್ತೂರು ರಾಣಿ ಚನ್ನಮ್ಮ ಅವರ ಜೀವನ, ಸಾಧನೆ, ಧೈರ್ಯ, ಸಾಹಸ ಹಾಗೂ ಬ್ರಿಟಿಷರ ವಿರುದ್ಧ ನಡೆಸಿದ ವೀರೋಚಿತ ಹೋರಾಟದ ಕುರಿತು ಮಾಹಿತಿ ನೀಡಿದರು. ರಾಣಿ ಚನ್ನಮ್ಮ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತೋರಿದ ಧೈರ್ಯ, ದೇಶಪ್ರೇಮ ಮತ್ತು ತ್ಯಾಗದ ಗುಣಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಎಸ್‌. ಬಿ. ಕಲ್ಲೋಳಿ, ಎಸ್‌. ಡಿ. ಪಾಟೀಲ್, ಎಸ್‌. ಎಸ್‌. ಬಿರಾದಾರ್, ಎಸ್‌. ಬಿ. ವಡ್ಡರ್ ಹಾಗೂ ಎಸ್‌. ಎನ್‌. ಕೋಳೆಕರ ಉಪಸ್ಥಿತರಿದ್ದರು. 


ಸುದ್ದಿ ಓದಿ