ಬೆಳಗಾವಿ

ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಚೆನ್ನರಾಜ ಹಟ್ಟಿಹೊಳಿ ಭೂಮಿಪೂಜೆ

ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಚೆನ್ನರಾಜ ಹಟ್ಟಿಹೊಳಿ ಭೂಮಿಪೂಜೆ
Chennaraja Hattiholi performs the groundbreaking ceremony for the construction of Anganwadi building



ಬೆಳಗಾವಿ 09 : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವ ಹಾಗೂ ಅಂಗನವಾಡಿ ಕೇಂದ್ರಗಳ ಮೂಲಸೌಕರ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕ್ಷೇತ್ರದ ಕುಮಾರಸ್ವಾಮಿ ಲೇಓಟ್ ಹಾಗೂ ಸಹ್ಯಾದ್ರಿ ನಗರದಲ್ಲಿ ತಲಾ 20 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರಗಳ ಕಟ್ಟಡ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿ, ಕಾಮಗಾರಿಗಳಿಗೆ ಚಾಲನೆ ನೀಡಿದರು.  

ಎರಡೂ ಪ್ರದೇಶಗಳಲ್ಲಿ ಒಟ್ಟು 40 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರಗಳ ನೂತನ ಕಟ್ಟಡಗಳು ನಿರ್ಮಾಣಗೊಳ್ಳಲಿದ್ದು, ಸ್ಥಳೀಯ ಮಕ್ಕಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಕಾಮಗಾರಿಗಳು ಮಹತ್ವದ್ದಾಗಿವೆ. ಅಂಗನವಾಡಿ ಕೇಂದ್ರಗಳು ಮಕ್ಕಳ ಆರಂಭಿಕ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಆರೋಗ್ಯದ ಕಾಳಜಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ಹಿನ್ನೆಲೆಯಲ್ಲಿ ಸುಸಜ್ಜಿತ ಕಟ್ಟಡಗಳ ನಿರ್ಮಾಣವು ಮಕ್ಕಳ ಕಲಿಕೆ ಮತ್ತು ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಲು ನೆರವಾಗಲಿದೆ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು. 


ಸುದ್ದಿ ಓದಿ