ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸ ಕಾರ್ಯಕ್ರಮ

Chief Minister Siddaramaiah's tour program

ಬಳ್ಳಾರಿ 14: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 16 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು. 

ಮೇ 16 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್‌ಎಎಲ್‌ನ ವಿಮಾನ ನಿಲ್ದಾಣದಿಂದ (ವಿಶೇಷ ವಿಮಾನದ ಮೂಲಕ) ಹೊರಟು ಬೆಳಿಗ್ಗೆ 10.50 ಕ್ಕೆ ತೋರಣಗಲ್‌ನ ಜಿಂದಾಲ್‌ನ ಏರ್‌ಸ್ಟ್ರಿಪ್ ಗೆ ಆಗಮಿಸುವರು. 

ನಂತರ ಬೆಳಿಗ್ಗೆ 11 ಗಂಟೆಗೆ ತೋರಣಗಲ್‌ನ ಜಿಂದಾಲ್ ಏರ್‌ಸ್ಟ್ರಿಪ್‌ನಿಂದ ರಸ್ತೆಯ ಮೂಲಕ ಹೊರಟು, 11.30 ಗಂಟೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆಗೆ ತಲುಪಿ ಮೇ 20 ರಂದು ರಾಜ್ಯ ಸರ್ಕಾರವು ಎರಡು ವರ್ಷಗಳು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಿರುವ ಸ್ಥಳ ಪರೀಶೀಲನೆ ನಡೆಸುವರು. 

ಬಳಿಕ ಮಧ್ಯಾಹ್ನ 01.30 ಗಂಟೆಗೆ ಅಲ್ಲಿಂದ ಹೊರಟು, 02 ಗಂಟೆಗೆ ತೋರಣಗಲ್‌ನ ಜಿಂದಾಲ್ ಏರ್‌ಸ್ಟ್ರಿಪ್‌ಗೆ ಆಗಮಿಸಿ, 02.15 ಕ್ಕೆ ವಿಶೇಷ ವಿಮಾನದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಸುವರು ಎಂದು ಮುಖ್ಯಮಂತ್ರಿಯವರ  ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿ ಕೆ.ಚಿರಂಜೀವಿ ಅವರು ತಿಳಿಸಿದ್ದಾರೆ.