ಬೆಳ್ಳೂರಿನ ಆದಿಚುಂಚನಗಿರಿ ಮಠಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ
ಮಂಡ್ಯ, 12 ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಗುರುವಾರ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದರು. ಆದಿಚುಂಚನಗಿರಿಯಲ್ಲಿನ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿಯವರು ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮಠದ ಶ್ರೀ ನಿರ್ಮಲಾನಂದ ಸ್ವಾಮಿ ಅವರು ಮುಖ್ಯಮಂತ್ರಿಯವರಿಗೆ ಭವ್ಯ ಸ್ವಾಗತ ಕೋರಿದರು.ಕುತೂಹಲ ಸಂಗತಿ ಎಂದರೆ, ನಾಗಮಂಗಲದ ಜೆಡಿಎಸ್ ಶಾಸಕ ಸುರೇಶ್ ಗೌಡ ಮುಖ್ಯಮಂತ್ರಿ ಪಾದ ಮುಟ್ಟಿ ಆಶೀರ್ವಾದ ಕೋರಿದರು. ಮುಖ್ಯಮಂತ್ರಿಯವರೊಂದಿಗೆ ಸಚಿವರಾದ ಆರ್.ಅಶೋಕ್ ಮತ್ತು ಕೆ.ಆರ್.ಪೇಟೆಯಿಂದ ಉಪಚುನಾವಣೆಯಲ್ಲಿ ಪುನರಾಯ್ಕೆಯಾಗಿರುವ ಶಾಸಕ ನಾರಾಯಣಗೌಡ ಇದ್ದರು.ಬಳಿಕ ಜೆಡಿಎಸ್‍ನ ಭದ್ರಕೋಟೆ ಎನಿಸಿದ್ದ ಕೆ.ಆರ್.ಪೇಟೆಯಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ತೆರಳಿದರು. ಆ ನಂತರ ಅವರು ತಮ್ಮ ಸ್ವಗ್ರಾಮಕ್ಕೆ ಭೇಟಿ ನೀಡಲಿದ್ದಾರೆ.ಸಚಿವ ಸಂಪುಟ ವಿಸ್ತರಣೆ ಕುರಿತು ನಿನ್ನೆ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರಮೋದಿ ಮತ್ತು ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 