ಜಿ-ಎನ್‌ಟಿಟಿಎಫ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಗೆ ಸನ್ಮಾನ
Chief Minister felicitated at G-NTTF event
ಜಿ-ಎನ್‌ಟಿಟಿಎಫ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಗೆ ಸನ್ಮಾನ
ಗದಗ 05 : ನಗರದ ಹುಬ್ಬಳ್ಳಿ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಜಿ-ಎನ್‌ಟಿಟಿಎಫ್ ಆವರಣದಲ್ಲಿ ದಿ. ಗದಗ ಕೋ-ಆಪ್ ಇಂಡಸ್ಟ್ರಿಯಲ್ ಎಸ್ಟೇಟ್ ಲಿ. ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಿ-ಎನ್‌ಟಿಟಿಎಫ್‌ನ ಉದ್ಘಾಟನಾ ಸಮಾರಂಭದಲ್ಲಿ ಜಿ-ಎನ್‌ಟಿಟಿಎಫ್‌ನ ಚೇರ್ಮನ್ ಕೃಷ್ಣಗೌಡ ಎಚ್. ಪಾಟೀಲ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿದರು.
ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಎನ್‌ಟಿಟಿಎಫ್ ಎಂಡಿ ರವಿ ಟೆನ್ನೆಟಿ, ಅತಿಥಿಗಳಾಗಿ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್, ಶಾಸಕರಾದ ಬಸವರಾಜ ಶಿವಣ್ಣನವರ, ಎನ್.ಎಚ್. ಕೋನರಡ್ಡಿ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಗದಗ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಸಿಐಇ ಅಧ್ಯಕ್ಷ ಆರ್.ಆರ್. ಓದುಗೌಡರ, ಉಪಾಧ್ಯಕ್ಷ ಪಿ.ಬಿ. ದಂಡಾವತಿಮಠ ಸೇರಿ ಆಡಳಿತ ಮಂಡಳಿ ಸದಸ್ಯರು ಹಾಗೂ ಉದ್ಯಮಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 