ಸರಕು ಸಾಗಾಣಿಕೆ ಅಕ್ರಮ- ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು, ಜೂನ್ 6, ಇ-ವೇ ಬಿಲ್ ದುರ್ಬಳಕೆ ಮತ್ತಿತರ ಅಕ್ರಮ ಪತ್ತೆ ಹಚ್ಚಿ ದಂಡ ವಿಧಿಸುವುದರೊಂದಿಗೆ ಈ ಸರಕು ಸಾಗಾಣಿಕೆ ಮಾಡುವ ಸಾರಿಗೆ ಕಂಪೆನಿಗಳ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.ಅವರು ಇಂದು ವಾಣಿಜ್ಯ ತೆರಿಗೆ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದ ತೆರಿಗೆ ಸಂಗ್ರಹ ಸ್ಥಿತಿಗತಿಯನ್ನು ಪರಿಶೀಲಿಸಿದರು.ಕಳೆದ ತಿಂಗಳು ಸಭೆ ನಡೆಸಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ನಕಲಿ ಇ-ವೇ ಬಿಲ್ ಗಳ ಬಳಕೆ, ಸರಕು ಸಾಗಾಣಿಕೆಗೆ ನೀಡುವ ಸಮಯಾವಕಾಶದ ದುರ್ಬಳಕೆ ಮುಂತಾದ ಪ್ರಕರಣಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು.ಅದರಂತೆ ರಸ್ತೆ ಜಾಗೃತಿ ತಂಡಗಳನ್ನು 77ರಿಂದ 116ಕ್ಕೆ ಹೆಚ್ಚಿಸಲಾಗಿದೆ. ಈ ತಂಡಗಳು 2.89 ಲಕ್ಷ ಸರಕು ವಾಹನಗಳು ಹಾಗೂ 7.46 ಲಕ್ಷ ಇ-ವೇ ಬಿಲ್ ಗಳನ್ನು ಪರಿಶೀಲಿಸಲಾಗಿದೆ.
ಇದರಲಲ್ಲಿ ಸುಮಾರು 300 ಅಕ್ರಮಗಳು ಪತ್ತೆಯಾಗಿದ್ದು, 6.21 ಕೋಟಿ ರೂ. ತೆರಿಗೆ ಹಾಗೂ ದಂಡ ಸಂಗ್ರಹಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಇದಲ್ಲದೆ, 40 ಲಕ್ಷ ರೂಪಾಯಿಗೂ ಹೆಚ್ಚಿನ ವ್ಯವಹಾರ ಇರುವ ಡೀಲರುಗಳ ಸಮೀಕ್ಷೆ ನಡೆಸುವಂತೆ ಹಾಗೂ ಮಾಸಿಕ 20 ಲಕ್ಷ ರೂ. ಗಳಿಗೆ ಹೆಚ್ಚು ಬಾಡಿಗೆ ಸಂಗ್ರಹಿಸುವ ದೊಡ್ಡ ನಗರಗಳ ವಾಣಿಜ್ಯ ಸಂಕೀರ್ಣಗಳ ಸಮೀಕ್ಷೆ ನಡೆಸುವಂತೆ ನಿರ್ದೇಶನ ನೀಡಿದರು.ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ಡಿಸೆಂಬರ್ ನಿಂದ ಫೆಬ್ರುವರಿ ತಿಂಗಳ ವರೆಗಿನ ಜಿ ಎಸ್ ಟಿ ಪರಿಹಾರ ಮೊತ್ತ 4314.13 ಕೋಟಿ ರೂ. ಬಿಡುಗಡೆಯಾಗಿದೆ. ಅಲ್ಲದೆ, ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಸಂಗ್ರಹದಲ್ಲಿ ಏರಿಕೆ ಕಂಡು ಬರುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಂ.ಎಸ್. ಶ್ರೀಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 