ಹಿರಿಯ ಸಾಹಿತಿ ಗೀತಾ ನಾಗಭೂಷಣ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ
ಬೆಂಗಳೂರು, ಜೂ 29: ಹಿರಿಯ ಸಾಹಿತಿ ಗೀತಾ ನಾಗಭೂಷಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಗೀತಾ ನಾಗಭೂಷಣ ಅವರು ಕಾದಂಬರಿ, ಕಥೆ, ಕವಿತೆ, ಸಂಶೋಧನೆ ಹೀಗೆ ವಿವಿಧ ಪ್ರಕಾರಗಳಲ್ಲಿ ತಮ್ಮ ಛಾಪು ಮೂಡಿಸಿದವರು . ಅವರ ಕಾದಂಬರಿಗಳಲ್ಲಿನ ಹೆಣ್ಣಿನ ಬದುಕಿನ ಚಿತ್ರಣಗಳು ವಾಸ್ತವತೆಯನ್ನು ಬಿಂಬಿಸು ತ್ತಿದ್ದವು.
ಕಲ್ಯಾಣ ಕರ್ನಾಟಕದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಬೆಳೆದ ಗೀತಾ ನಾಗಭೂಷಣ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಹಾಗೂ ನಾಡೋಜ ಪದವಿ ಪಡೆದ ರಾಜ್ಯದ ಮೊದಲ ಮಹಿಳೆ ಎಂದು ಸ್ಮರಿಸಿದ್ದಾರೆ.ಭಗವಂತನು ಗೀತಾ ನಾಗಭೂಷಣಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧುವರ್ಗ, ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 