ತೀವ್ರ ಬೇಸಿಗೆಯಲ್ಲಿ ದಾಹ ನೀಗಿಸಲು ಚಿಕ್ಕೋಡಿ ತಾಲೂಕಾಡಳಿತ ಕಸರತ್ತು: ಹಿರೇಕೊಡಿ ಸೇರಿ ಹಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರುಹಿ ಬಹುಗ್ರಾಮ ಯೋಜನೆ ಪರೀಶೀಲನೆ
ಚಿಕ್ಕೋಡಿ 26: ತೀವ್ರ ಬೇಸಿಗೆಯಿಂದ ಉಂಟಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯಿಂದ ಜನರಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಚಿಕ್ಕೋಡಿ ತಾಲೂಕಿನ ತಾಲೂಕಾ ಪಂಚಾಯತ್ ಹಾಗೂ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು, ನೀರಿನ ಕೊರತೆ ಕಂಡುಬಂದ ಪ್ರದೇಶಗಳಲ್ಲಿ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಜನರ ಸಮಸ್ಯೆ ನಿವಾರಣೆಗೆ ಮುಂದಾಗಿದ್ದಾರೆ. ವಿಶೇಷವಾಗಿ ಹಿರೇಕೊಡಿ ಗ್ರಾಮ ಮತ್ತು ತೋಟಪಟ್ಟಿ ಪ್ರದೇಶಗಳಲ್ಲಿ ನೀರಿನ ತೊಂದರೆ ಎದುರಾದ ಹಿನ್ನೆಲೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಜನರಿಗೆ ತಾತ್ಕಾಲಿಕ ಪರಿಹಾರ ಒದಗಿಸಲಾಗಿದೆ.
ಇದಲ್ಲದೆ, ಹಿರೇಕೊಡಿ ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ದೂಧಗಂಗಾ ನದಿಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದರು. ನದಿ ತಟದಲ್ಲಿ ಪಂಪ್ಸೆಟ್ ಅಳವಡಿಸಿಕೊಂಡಿರುವ ರೈತರಿಗೆ ಮನವರಿಕೆ ಮಾಡಿ, ಯೋಜನೆಯಿಂದ ಸಮರ್ಕವಾಗಿ ನೀರು ಪೂರೈಕೆ ಆಗುವಂತೆ ಕ್ರಮ ಕೈಗೊಳ್ಳಲಾಗಿದೆ. ತಾಲೂಕಿನ ಉಮರಾಣಿ, ಬಂಬಲವಾಡ, ಕುಂಗಟೊಳ್ಳಿ, ವಡ್ರಾಳ ಸೇರಿದಂತೆ ಹಲವು ಗ್ರಾಮಗಳಲ್ಲಿ ಅಗತ್ಯವಿರುವ ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ.ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು ಸಮರ್ಕವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಲು ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಡಿ.ನಾಯಿಕವಾಡಿ, ನರೇಗಾ ಸಹಾಯಕ ನಿರ್ದೇಶಕ ಶಿವಾನಂದ ಶಿರಗಾಂವೆ,
ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಬಾಳಾಸಾಹೇಬ ಜಂಬಗಿ ಹಾಗೂ ಹಿರೇಕೊಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆರಿ್ಬ.ಬೆಳಕೂಡೆ ಸ್ಥಳಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಬೇಸಿಗೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಅಗತ್ಯವಿರುವ ಕಡೆ ತಕ್ಷಣ ಟ್ಯಾಂಕರ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಬಾಳಾಸಾಹೇಬ ಜಂಬಗಿ ತಿಳಿಸಿದರು.ಕೋಟ್ ತಾಲೂಕಿನ ಹಿರೇಕೊಡಿ ವ್ಯಾಪ್ತಿಯ ಹತ್ತಿಮರಡಿಯಲ್ಲಿ ನೀರಿನ ಸಮಸ್ಯೆ ಕಂಡು ಬಂದಿತು. ಜಿಪಂ ಸಿಇಒ ರಾಹುಲ್ ಶಿಂಧೆ ಮಾರ್ಗದರ್ಶನದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು ನದಿ ಪ್ರದೇಶ ಹಾಗೂ ಕೊಳವೆ ಬಾವಿ ಇರುವ ಕಡೆ ಪರೀಶೀಲನೆ ನಡೆಸಿ ತಕ್ಷಣಾ ಟ್ಯಾಂಕರ ಹಾಗೂ ಬಹುಗ್ರಾಮ ಯೋಜನೆ ಮೂಲಕ ನೀರು ಪೂರೈಕೆ ಮಾಡಿ ಸಮಸ್ಯೆ ಬಗೆಹರಿಸಲಾಗಿದೆ.