ಚಿಕುನ್ಗುನ್ಯಾ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಂದ ಪರಿಶೀಲನೆ
ವಿಜಯಪುರ 31: ವಿಜಯಪುರ
ತಾಲೂಕಿನ ನಾಗರಾಳ ಗ್ರಾಮದಲ್ಲಿ ಚಿಕುನಗುಣ್ಯಾ ಪ್ರಕರಣ ಕಂಡು ಬಂದ ಹಿನ್ನೆಲಯಲ್ಲಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಮಹೇಂದ್ರ ಕಾಪ್ಸೆ,
ಡಾ.ಗುಣಾರಿ, ಡಾ.ಕೆ.ಡಿ.ಗುಂಡಬಾವಡಿ ಅವರು ಸದರಿ ಗ್ರಾಮಕ್ಕೆ
ಬುಧವಾರ ಭೇಟಿ ನೀಡಿ ಪರಿಶೀಲನೆ
ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಪಿಡಿಓಗಳು ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು. ಅದರಂತೆ ನೀರಿನ ಮೂಲಗಳಿಗೆ ವಾರಕ್ಕೊಮ್ಮೆ ಕ್ಲೋರಿನೇಶನ್ ಮಾಡಿಸಲು ಜಿಲ್ಲಾ ಆರೋಗ್ಯ ಅಧಿಕಾರಿಗಳು ಸೂಚನೆ ನೀಡಿದರು.
ಡಾ.ಕೆ.ಡಿ.ಗುಂಡಬಾವಡಿ ಅವರು, ಚಿಕುನಗುಣ್ಯಾ ರೋಗ ತಡೆಗಟ್ಟಲು ಸಾರ್ವಜನಿಕರು
ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು
ಸ್ವಚ್ಛವಾಗಿಟ್ಟುಕೊಳ್ಳಬೇಕು.
ಸುತ್ತಮುತ್ತ ನೀರು ಕೊಳಚೆಯಾಗದಂತೆ ನೋಡಿಕೊಳ್ಳಬೇಕು.
ಮನೆಯಲ್ಲಿ ಶೇಖರಿಸಿದ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಪಾತ್ರೆಗಳನ್ನು
ತೊಳೆದು ಮತ್ತೆ ನೀರು ತುಂಬಬೇಕು. ಚಿಕುನಗುನ್ಯಾ
ಸೊಳ್ಳೆಗಳಿಂದ ಹರಡುವ ರೋಗವಾಗಿದ್ದು,ಎಲ್ಲಿಯೂ ಕಲುಷಿತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು
ಎಂದು ಹೇಳಿದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳು ಮನೆ-ಮನೆಗೆ ತೆರಳಿ
ಚಿಕುನಗುನ್ಯಾ ರೋಗದ ಕುರಿತು ತಿಳುವಳಿಕೆ
ನೀಡಿದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 