ಬಾಲ್ಯ ವಿವಾಹ ನಿಷೇಧ ಸಮನ್ವಯ ಸಮಿತಿ ಸಭೆ
ಹೊಸಪೇಟೆ(ವಿಜಯನಗರ) 14: ಹೊಸಪೇಟೆ ತಹಸೀಲ್ದಾರ್ ವಿಶ್ವಜಿತ್ ಮೆಹತಾ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇಧ ಸಮನ್ವಯ ಸಮಿತಿ ಹಾಗೂ ಕಾವಲು ಸಮಿತಿ ಮತ್ತು ಕೌಟುಂಬಿಕ ದೌರ್ಜನ್ಯ ಕಾಯ್ದೆ ಸಮಿತಿಗಳ ಸಭೆ ಜರುಗಿತು.
ಸಮಾಜದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅಪ್ರಾಪ್ತ ಮಕ್ಕಳು ಗರ್ಭೀಣಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಕೇಳಿಬರುತ್ತಿದ್ದು,ಈ ವಿಷಯಗಳ ಕುರಿತು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಮಕ್ಕಳ ರಕ್ಷಣಾಘಟಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಹಸೀಲ್ದಾರ್ ವಿಶ್ವಜಿತ್ ಮೆಹತಾ ಅವರು ಸೂಚನೆ ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸಿಂಧು ಅಂಗಡಿ ಅವರು ಬಾಲ್ಯ ವಿವಾಹ ನಿಷೇಧ ಸಮನ್ವಯ ಸಮಿತಿಯಲ್ಲಿರುವ ಸದಸ್ಯರುಗಳಿಗೆ ತಾಲೂಕಿನಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಕುರಿತು ಸಭೆಯಲ್ಲಿ ವಿವರಿಸಿದರು.
ಕಾವಲು ಸಮಿತಿ ಮತ್ತು ಕೌಟುಂಬಿಕ ದೌರ್ಜನ್ಯ ಕಾಯ್ದೆ ಸಮಿತಿಗಳ ಕುರಿತಾದ ಮಾಹಿತಿಯನ್ನು ಸಭೆಯಲ್ಲಿ ಸಿಡಿಪಿಒ ಸಿಂಧು ಅವರು ವಿವರಿಸಿದರು.
ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಗೂ ವಿವಿಧ ಸಮಿತಿಗಳ ಸದಸ್ಯರುಗಳು ಹಾಜರಿದ್ದರು.