ಬಳ್ಳಾರಿ

ಬಾಲ್ಯವಿವಾಹದಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆ: ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ

ಬಾಲ್ಯವಿವಾಹದಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆ: ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ
Child marriage leads to violation of children's rights: District Health Education Officer Shivananda

           ಬಳ್ಳಾರಿ,ನ.13:   ಹೆಣ್ಣಿಗೆ 18 ವರ್ಷ ಹಾಗೂ ಗಂಡಿಗೆ 21 ವರ್ಷ ತುಂಬುವ ಮುನ್ನ ಮಾಡುವ ಮದುವೆ ಬಾಲ್ಯವಿವಾಹವಾಗಿದ್ದು, ಇದು ಶಿಕ್ಷಾರ್ಹ ಅಪರಾಧ ಹಾಗೂ ಮಕ್ಕಳ ಮೂಲಭೂತ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ ಅವರು ತಿಳಿಸಿದರು. 

         ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ತೋರಣಗಲ್ಲು ಮತ್ತು ಮಾದರಿ ಸರ್ಕಾರಿ ಪ್ರೌಢಶಾಲೆ ತೋರಣಗಲ್ಲು ಇವರ ಸಂಯುಕ್ತಾಶ್ರಯದಲ್ಲಿ ಶಾಲೆಯ ಸಭಾ ಭವನದಲ್ಲಿ ‘ಬಾಲ್ಯವಿವಾಹ ನಿಷೇಧ ಹಾಗೂ ಹದಿಹರೆಯದವರ ಆರೋಗ್ಯ ರಕ್ಷಣೆ’ ಕುರಿತು ಶುಕ್ರವಾರ ಆಯೋಜಿಸಿದ್ದ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರುಯ ಅವರು ಮಾತನಾಡಿದರು. 

              ಬಾಲ್ಯವಿವಾಹವು ಸಮಾಜದ ದೊಡ್ಡ ಪಿಡುಗಾಗಿದ್ದು, ಇದನ್ನು ಹೋಗಲಾಡಿಸಲು ಪ್ರತಿಯೊಬ್ಬ ನಾಗರಿಕರೂ ಜಾಗೃತರಾಗಬೇಕು. ಬಾಲ್ಯವಿವಾಹದಿಂದ ಹೆಣ್ಣುಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿವೆ. ಕಡಿಮೆ ವಯಸ್ಸಿನ ಗರ್ಭಧಾರಣೆ, ರಕ್ತಹೀನತೆ (ಅನೀಮಿಯಾ), ತಾಯಿ ಮತ್ತು ಶಿಶು ಮರಣದ ಅಪಾಯ, ಕಡಿಮೆ ತೂಕದ ಮಗು, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ, ಪೌಷ್ಟಿಕಾಂಶದ ಕೊರತೆ, ಶಿಕ್ಷಣ ಮತ್ತು ಭವಿಷ್ಯದ ಮೇಲಿನ ಪರಿಣಾಮ ಬೀರುತ್ತದೆ ಎಂದು ಹೇಳಿದರು. 

          ಭಾರತದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ 2006 ಜಾರಿಯಲ್ಲಿದ್ದು, ಬಾಲ್ಯವಿವಾಹ ಮಾಡಿಸುವುದು, ಭಾಗವಹಿಸುವುದು ಮತ್ತು ಪ್ರೋತ್ಸಾಹಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ತಪ್ಪಿತಸ್ಥರಿಗೆ 2 ವರ್ಷಗಳವರೆಗೆ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು. 


ಸುದ್ದಿ ಓದಿ