ಮಕ್ಕಳ ಪಾಲನೆ ಪೋಷಣೆ ನಮ್ಮೆಲ್ಲರ ಜವಾಬ್ದಾರಿ
ಬಾಗಲಕೋಟೆ18: ಹೆತ್ತವರಿಂದ ತ್ಯಜಿಸಿ, ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಪಾಲನೆ ಪೋಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶರ್ಿ ಹೇಮಲತಾ ಹುಲ್ಲೂರ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬಾಲನ್ಯಾಯ ಕಾಯ್ದೆ 2015ರ ಅಡಿಯಲ್ಲಿ ನೋಂದಣಿಯಾದ ಮಕ್ಕಳ ಪಾಲನಾ ಸಂಸ್ಥೆಗಲ ವ್ಯವಸ್ಥಾಪಕ ಸಮಿತಿ ಹಾಗೂ ಮಕ್ಕಳ ಸಮಿತಿ ಬಲವರ್ಧನೆ ಕುರಿತು ಹಮ್ಮಿಕೊಂಡ ಕಾರ್ಯಾಗಾರ ಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಅಭಿವೃದ್ದಿ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಮಕ್ಕಳ ಸದೃಡ ಬೆಳೆವಣಿಗೆ, ಶಿಕ್ಷಣ ಅಗತ್ಯವಾಗಿದ್ದು, ಮಕ್ಕಳ ಪಾಲನಾ ಸಂಸ್ಥೆಯಲ್ಲಿರುವ ಮಕ್ಕಳ ಶಿಕ್ಷಣವು ಅಷ್ಟೇ ಮಹತ್ವವಾಗಿದೆ. ಹೆತ್ತವರಿಂದ ತ್ಯಜಿಸಿದ ಹಾಗೂ ದೌರ್ಜನ್ಯಕ್ಕೆ ಒಳಗಾದ ಮಕ್ಕಳು ತಮ್ಮ ಸಂಸ್ಥೆಯಲ್ಲಿರುವದಿಂದ ಅಂತಹ ಮಕ್ಕಳ ಪಾಲನೆ ಪೋಷಣೆಗೆ ಸಂಸ್ಥೆಗಳು ಶ್ರಮಿಸಬೇಕು. ಸರಕಾರ ತಮ್ಮ ಸಂಸ್ಥೆಯನ್ನು ಗುರುತಿಸಿ ಮಕ್ಕಳ ಪೋಷನೆ ಕಾರ್ಯವನ್ನು ವಹಿಸಿರುವದರಿಂದ ಆ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ 22 ಪಾಲನಾ ಸಂಸ್ಥೆಗಳಿದ್ದು, ಸಂಸ್ಥೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೆಲವೊಂದು ನೂನ್ಯತೆಗಳು ಕಂಡುಬಂದಿರುತ್ತವೆ. ಅವುಗಳನ್ನು ಸರಿಪಡಿಸಿಕೊಳ್ಳಬೇಕು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಗುಲಾಬ ನಧಾಪ್ ಮಾತನಾಡಿ ಮಕ್ಕಳ ಬೆಳವಣಿಗೆ, ಅಭಿವೃದ್ದಿ ಹಾಗೂ ವಿಕಾಸಕ್ಕೆ ಉತ್ತಮ ವಾತಾವರಣ ಅಗತ್ಯವಾಗಿದೆ. ಭಾವನೆ ಹಾಗೂ ಪರಿಸ್ಥಿತಿಯನ್ನು ಅರಿವು ಪೋಷಣೆ ಮಾಡಬೇಕು. ಸಂಸ್ಥೆಗಳು ಜೆ.ಜೆ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಮಕ್ಕಳ ಹಕ್ಕುಗಳಿಗೆ ಯಾವುದೇ ರೀತಿಯ ಚ್ಯುತಿ ಬರದಂತೆ ನೋಡಿಕೊಳ್ಳಬೇಕು. ಪಾಲನಾ ಸಂಸ್ಥೆಯಲ್ಲಿ ಸೌಲಭ್ಯಗಳ ಕೊರತೆ ಕಂಡುಬರುತ್ತದೆಯೋ ಅಲ್ಲಿ ಜೆ.ಜೆ ಕಾಯ್ದೆ ಅನ್ವಯವಾಗಲಿದೆ ಎಂದ ಅವರು ಸಾಮಾಜಿಕ ವೈದ್ಯರಾಗಿ ಕೆಲಸ ನಿರ್ವಹಿಸಲು ತಿಳಿಸಿದರು.
ಜಿ.ಪಂ ಉಪಕಾರ್ಯದಶರ್ಿ ಎ.ಜಿ.ತೋಟದ ಮಾತನಾಡಿ ಮಕ್ಕಳ ಪಾಲನಾ ಸಂಸ್ಥೆಗಳು ದಾಖಲಾತಿಗಳ ನಿರ್ವಹಣೆ ಅಗತ್ಯವಾಗಿದೆ. ಕಾಯ್ದೆ ಕಾನೂನುಗಳ ಬಗ್ಗೆ ತಿಳಿದುಕೊಂಡಿರಬೇಕು. ತಮಗೆ ಉಂಟಾಗುವ ಸಮಸ್ಯೆಗಳನ್ನು ಸಮಿತಿಯ ಮುಂದೆ ಇಡಬೇಕುತಿಳಿಸಿದರು.
ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಕೊಪ್ಪಳ ಯುನಿಸೆಫ್ನ ಸಂಯೋಜಕ ಹರೀಶ ಜೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿದರ್ೇಶಕ ಮಲ್ಲಿಕಾಜರ್ುನ ರೆಡ್ಡಿ ಅವರು ಮನೆಯಲ್ಲಿರುವ ವಾತಾವರಣದ ಹಾಗೇ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಕಲ್ಪಿಸುವ ಮೂಲಕ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಎನ್.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಿಎಸ್ಪಿ ಶಿರೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 