ಮಕ್ಕಳ ದಿನಾಚರಣೆ: ಶಿಕ್ಷಕ - ಪೋಷಕರ ಮಹಾಸಭೆ
Children's Day: Teacher-Parent General Assembly
ಸಿಂದಗಿ 12: ಮಕ್ಕಳ ದಿನಾಚರಣೆಯಂದು ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕ - ಪೋಷಕರ ಮಹಾಸಭೆ ಆಯೋಜನೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಯಡ್ರಾಮಿ ಹೇಳಿದರು.
ಸರ್ಕಾರದ ಸುತ್ತೋಲೆಯಂತೆ ನವಂಬರ್ 14.2025 ರ ಮಕ್ಕಳ ದಿನಾಚರಣೆಯಂದು ಸಿಂದಗಿ, ದೇವರಹಿಪ್ಪರಗಿ ಮತ್ತು ಆಲಮೇಲ ತಾಲೂಕಿನ ಎಲ್ಲ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕ-ಪೋಷಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಈ ಮಹಾಸಭೆಯನ್ನು ತಾಲೂಕಿನ ಎಲ್ಲಾ ಅನುಷ್ಠಾನಾಧಿಕಾರಿಗಳ, ಸಿ ಆರ್ ಪಿ,ಬಿ ಆರ್ ಪಿ, ಇ ಸಿ ಓ ರವರು ಅತ್ಯಂತ ಅಚ್ಚುಕಟ್ಟಾಗಿ ಆಯೋಜಿಸಿ ಯಶಸ್ವಿಗೊಳಿಸಲು ಗೂಗಲ್ ಮೀಟ್ ಸಭೆಯ ಮೂಲಕ ಸೂಚನೆ ನೀಡಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಶಿಕ್ಷಕ-ಪೋಷಕ ಮಹಾಸಭೆಯಲ್ಲಿ, ಸಂವಿಧಾನ ಪೀಠಿಕೆಯ ಓದು, ಮಕ್ಕಳ ಕಲಿಕಾ ಪ್ರಗತಿ, ದಾಖಲಾತಿ ಮತ್ತು ಹಾಜರಾತಿ,ಎಸ್ ಎಲ್ ಸಿ ಪರೀಕ್ಷೆಯ ಪೂರ್ವ ಸಿದ್ಧತೆ, ಪರೀಕ್ಷಾ ಭಯ ನಿವಾರಣೆ,ಪಾಠ ಆಧಾರಿತ ಮೌಲ್ಯಮಾಪನದ ವಿಶ್ಲೇಷಣೆ, ಇಲಾಖೆಯ ಪ್ರೋತ್ಸಾಹದಾಯಕ ಯೋಜನೆಗಳು, ಶಾಲೆಯ ಸವಾಂರ್ಗೀಣ ಅಭಿವೃದ್ಧಿಯಲ್ಲಿ ಪೋಷಕರ ಹಾಗೂ ಎಸ ಡಿಎಂಸಿ ಅವರ ಪಾತ್ರ, ಆರ್ ಟಿ ಇ ಕಾಯ್ದೆ, ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ನೀತಿ, ಠಿಠಠ ಕಾಯ್ದೆ, ಮಧ್ಯಾಹ್ನ ಉಪಹಾರ ಯೋಜನೆಯ ಸಮರ್ಕ ಅನುಷ್ಠಾನ, ಬಾಲ್ಯ ವಿವಾಹ ನಿಷೇಧ, ಬಾಲಕಾರ್ಮಿಕ ಪದ್ಧತಿ ನಿಷೇಧ ನೀತಿ,ವಿಶೇಷ ಚೇತನ ಮಕ್ಕಳಿಗೆ ಇಲಾಖೆಯ ಸೌಲಭ್ಯಗಳು, ಶಾಲೆಯ ಅಭಿವೃದ್ಧಿಯಲ್ಲಿ ಭಾಗಿದಾರರ ಪಾತ್ರ, ಮತ್ತು ಮಕ್ಕಳ ಪ್ರತಿಭೆ ಗುರುತಿಸುವ ವೇದಿಕೆಯಾಗಿ ಪೋಷಕ-ಶಿಕ್ಷಕ ಮಹಾಸತಭೆಯನ್ನು ಅರ್ಥಪೂರ್ಣವಾಗಿ ಬಳಸಿಕೊಳ್ಳಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಚಿಸಿದರು. ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನದವರೆಗೆ ವೇಳಾಪಟ್ಟಿಯನುಸಾರ ಈ ಸಭೆಯನ್ನು ಆಯೋಜಿಸುವಂತೆ ಸೂಚಿಸಿದ್ದಾರೆ. ಅಂದು ಶಾಲೆಯಲ್ಲಿ ತಳಿರು-ತೋರಣಗಳಿಂದ ಸಿಂಗರಿಸಿ, ಸಿಹಿ ಊಟ ವಿತರಿಸಿ, ಮಕ್ಕಳ ಕಲಿಕಾ ಪ್ರಗತಿಯನ್ನು ಎಲ್ಲಾ ಪಾಲಕರ ಗಮನಕ್ಕೆ ತರುವಂತೆ ಪತ್ರಿಕಾ ಪ್ರಕಟಣೆಯ ಮೂಲಕ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ತಿಳಿಸಿದ್ದಾರೆ.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 