ಕೆಎಲ್‌ಇ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ
Children's Day celebration at KLE Hospital
ಚಿಕ್ಕೋಡಿ 14: ಇಂದಿನ ಮಕ್ಕಳೇ ನಾಳಿನ ರಾಷ್ಟ್ರದ ರುವಾರಿಗಳು ಮಕ್ಕಳನ್ನು ದೇಶದ ಆಸ್ತಿಯನ್ನಾಗಿ ಮಾಡುವುದು ಬಹಳ ಮುಖ್ಯಎಂದು ಕೆಎಲ್‌ಇ ಬಸವಪ್ರಭುಕೋರೆ ಪದವಿ ಕಾಲೇಜಿನ ಉಪ ಪ್ರಾಚಾರ್ಯರಾದ ಸುಧೀರ ಕೋಟಿವಾಲೆ ಹೇಳಿದರು.
ಅವರು ಇಂದು ಚಿಕ್ಕೋಡಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಕೆಕ್‌ಕತ್ತರಿಸುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಳ್ಳೆಯ ಶಿಕ್ಷಣದ ಜೊತೆಗೆ ಆದ್ಯಾತ್ಮಿಕ ಶಿಕ್ಷಣ ನೀಡುವುದು ಬಹಳ ಮುಖ್ಯ.ಅಲ್ಲದೆ ಮಕ್ಕಳು ದೇಶದ ಭವಿಷ್ಯಎಂದು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಧ್ಯೇಯವಾಗಿತ್ತು ಎಂದು ಹೇಳಿದರು.
ಚಿಕ್ಕ ಮಕ್ಕಳ ತಜ್ಞರಾದಡಾ. ಶಂಕರತೋರಸೆ ಮಾತನಾಡುತ್ತಾ ಈ ವರ್ಷದಧ್ಯೇಯವಾಕ್ಯ, "ಪ್ರತಿಯೊಬ್ಬ ಮಗುವಿಗಾಗಿ, ಪ್ರತಿಯೊಂದು ಹಕ್ಕು", ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಮತು ್ತಆರೋಗ್ಯಕರ ವಾತಾವರಣದಲ್ಲಿ ಅವರ ಸರಿಯಾದ ಬೆಳವಣಿಗೆಯನ್ನು ಖಚಿತಪಡಿಸಿಕೊಳ್ಳುವುದನ್ನು ಸೂಚಿಸುತ್ತದೆ ಮತ್ತು ಮಕ್ಕಳ ಸಂತೋಷ, ಶಿಕ್ಷಣ ಮತ್ತು ಆರೋಗ್ಯವನ್ನು ರಕ್ಷಿಸುವಕರ್ತವ್ಯ ನಮ್ಮ ಮೇಲಿದೆ ಎಂದು ಹೆಳಿದರು.ಕಾರ್ಯಕ್ರಮದಲ್ಲಿ ವೈದ್ಯರುಗಳಾದ ಡಾ.ಪ್ರಭಾವತಿ ಮುಗಳಕೋಡ, ಡಾ.ಅರವಿಂದ ಮಿನಚೇ, ಡಾ.ಅಭಿಷೇಕರಾಯ್ಕರ ಮಾತನಾಡಿದರು ಹಾಗೂ ಇತರೆ ಸಿಬ್ಬಂದಿ ವರ್ಗದವರು ಮತ್ತು ಕೆ ಎಲ್ ಇ ಶಾಲೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಪ್ರಶಾಂತ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 