ಬಳ್ಳಾರಿ ಮತ್ತು ವಿಜಯನಗರ ಗ್ರಾಮೀಣ ಪ್ರತಿಭೆಗೆ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕಾರ
Children's Literature Award for rural talent from Bellary and Vijayanagar
ವಿಜಯನಗರ 15: ಗ್ರಾಮೀಣ ಪ್ರತಿಭೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕಾರ ದೊರತಿರುವುದು ಅಖಂಡ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಖ್ಯಾತ ನ್ಯಾಯವಾದಿ ಹೆಚ್.ಪಿ. ಕಲ್ಲಂಭಟ್ಞ ತಿಳಿಸಿದರು.
ಕ.ಸಾ.ಪ ಅಖಂಡ ಬಳ್ಳಾರಿ ಜಿಲ್ಲಾಘಟಕ ಮತ್ತು ಹೊಸಪೇಟೆಯ ವಿಜಯನಗರ ಕಾಲೇಜು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾದ ಡಾ. ಕೆ ಶಿವಲಿಂಗಪ್ಪ ಹಂದಿಹಾಳು ಅವರ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಾ, ಅಖಂಡ ಬಳ್ಳಾರಿ ಜಿಲ್ಲೆಗೆಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗರಿಯನ್ನು ತಂದು ಕೊಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ಮಕ್ಕಳ ಸಾಹಿತಿಡಾ. ಕೆ.ಶಿವಲಿಂಗಪ್ಪ ಹಂದಿ ಹಾಳು ಅಭಿನಂದನೀಯರು ಎಂದು ಹೆಚ್.ಪಿ.ಕಲ್ಲಂಭಟ್ಞ ನುಡಿದರು.
ಡಾ. ಕೆ.ಶಿವಲಿಂಗಪ್ಪ ಹಂದಿಹಾಳು ಅವರನ್ನು ಅಭಿನಂದಿಸಿ ಮಾತನಾಡಿದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಸಾರಾಂಗ ನಿರ್ದೇಶಕರಾದಡಾ.ತಿಪ್ಪೇರುದ್ರ ಸಂಡೂರು ಅವರು, ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಶಿವಲಿಂಗಪ್ಪನವರು ತಮ್ಮ ’ನೋಟ್ ಬುಕ್’ ಕೃತಿಯ ಮೂಲಕ ಕನ್ನಡ ನಾಡಿಗೆಕೇಂದ್ರ ಸಾಹಿತ್ಯಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ ದೊರಕಿಸಿ ಕೊಟ್ಟಿರುವುದಕ್ಕಾಗಿ ಅವರನ್ನು ಅಭಿನಂದಿಸಲು ಸಂತಸ ವೆನಿಸುತ್ತದೆ ಎಂದರು. ಕಸಾಪ ಅಖಂಡ ಬಳ್ಳಾರಿ ಜಿಲ್ಲಾಘಟಕ ಮತ್ತು ವಿಜಯನಗರ ಕಾಲೇಜು ಹೊಸಪೇಟೆ ಇವರು ನನ್ನ ನೋಟ್ ಬುಕ್ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತ ಶುಭ ಸಂದರ್ಭದಲ್ಲಿ ನನ್ನನ್ನು ಆತ್ಮೀಯವಾಗಿ ಅಭಿನಂದಿಸುತ್ತಿರುವುದು ನನಗೆ ಸಂತೋಷವನ್ನುಂಟು ಮಾಡಿದೆ ಜೊತೆಗೆ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ಡಾ. ಕೆ ಶಿವಲಿಂಗಪ್ಪ ಹಂದಿಹಾಳು ತಿಳಿಸಿದರು. ವಿಜಯನಗರ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದಡಾ ಕೆ. ಮಲ್ಲಿಕಾರ್ಜುನ ಗೌಡ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ ತಮ್ಮ ಕಾಲೇಜು ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಸದಾ ಸಹಕಾರ ನೀಡುತ್ತದೆ ಎಂದರು. ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಕರುನಾಡ ಕಲಿಗಳ ಕ್ರಿಯಾ ಸಮಿತಿ ಅಧ್ಯಕ್ಷ ಗುಜ್ಜಲ ಗಣೇಶ ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾರ್ಯದರ್ಶಿಗಳಾದ ಪ್ರಕಾಶ್, ಉಮಾ ಮಹೇಶ್ವರ, ಮರಿಯಮ್ಮನಹಳ್ಳಿ ಹೋಬಳಿ ಅಧ್ಯಕ್ಷರಾದ ಬಿ.ಎಂ.ಎಸ್. ಮೃತ್ಯುಂಜಯಸ್ವಾಮಿ,
ಡಾ. ಶಿವಕುಮಾರ್ ಸಾತ್ಮಾರ್, ಕವಿಯತ್ರಿ ನೂರ್‌ಜಹಾನ್, ವಿಶಾಲ್ ಮ್ಯಾಸರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನಉಪನ್ಯಾಸಕಿ ಭಾರತಿ ಮಲ್ಲಿಕಾರ್ಜುನ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕರಾದ ಡಾ.ಗಾದೆಪ್ಪ ವಂದನಾರೆ್ಣ ಸಲ್ಲಿಸಿದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 