ಬೆಳಗಾವಿ: ಕಣ್ಮನ ಸೆಳೆದ ಮಕ್ಕಳ ವಿಜ್ಞಾನ ಹಬ್ಬ
ಲೋಕದರ್ಶನ ವರದಿ
ಬೆಳಗಾವಿ 12: ಶಾಲಾ ಮಕ್ಕಳನ್ನು ಕಾರ್ಯಕ್ರಮಗಳಲ್ಲಿ ನೋಡುವುದೆಂದರೆ ಎಲ್ಲಿಲ್ಲದ ಖುಷಿ ನೀಡುತ್ತದೆ. ಇಂತಹ ಸಂಭ್ರಮಕ್ಕೆ ಬುಧವಾರ ನಗರದ ವಡಗಾವಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಾಕ್ಷಿಯಾಯಿತು. ವಿಜ್ಞಾನ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
3 ಶಾಲೆಗಳ ಸುಮಾರು 150 ಕ್ಕೂ ಅಧಿಕ ವಿದ್ಯಾಥರ್ಿಗಳು ವಿವಿಧ ನೃತ್ಯ ಮಾಡುವ ಮೂಲಕ ಕಾರ್ಯಕ್ರಮ ಸ್ಥಳಕ್ಕೆ ಬರುತ್ತಿದ್ದ ದೃಶ್ಯ ಮನಮೋಹಕವಾಗಿತ್ತು.
ವಡಗಾವಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸೀಮಾ ರಾಯ್ಕರ್ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಮತ್ತು ಅನ್ವೇಷಣೆ ಬಗ್ಗೆ ಮಕ್ಕಳಲ್ಲಿ ಆಸಕ್ತಿ ಹುಟ್ಟಬೇಕು ಎಂಬ ಕಾರಣಕ್ಕೆ ಪ್ರಸಕ್ತ ವರ್ಷದಿಂದ ಸರಕಾರ ಈ ಕಾರ್ಯಕ್ರಮ ಆರಂಭಿಸಿದ್ದು, ಈ ನಿಟ್ಟಿನಲ್ಲಿ ಕ್ಲುಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ ಹಮ್ಮಿಕೊಳ್ಳಲಾಗಿದೆ. ಮಕ್ಕಳಲ್ಲಿ ಪ್ರಶ್ನೆ ಮಾಡುವ ಪೃವೃತ್ತಿ, ವಿಜ್ಞಾನ ಆಸಕ್ತಿ ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಹೇಳಿದರು.
ಉದ್ಯಮಿ ವಿಠ್ಠಲ್ ರಾವಳ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕರ ಸಂಘದ ನಗರ ಘಟಕದ ಅಧ್ಯಕ್ಷ ನಂದೀಶ್ ಕಾಕತಿಕರ್, ಮುಖ್ಯಾಧ್ಯಾಪಕರಾದ ವಿ.ಟಿ. ಅಪ್ಪಾಜಿ, ಎ.ಟಿ. ಕೋಲಕಾರ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 