ಮಕ್ಕಳು ನಮ್ಮ ದೇಶದ ಭವಿಷ್ಯ: ಪಟ್ಟಣ್ಣಶೆಟ್ಟಿ
Children are the future of our country: Pattannashetty
ಲೋಕದರ್ಶನ ವರದಿ
ಮಕ್ಕಳು ನಮ್ಮ ದೇಶದ ಭವಿಷ್ಯ: ಪಟ್ಟಣ್ಣಶೆಟ್ಟಿ
ಸಿಂದಗಿ 09: ಮಕ್ಕಳು ನಮ್ಮ ದೇಶದ ಭವಿಷ್ಯ. ಅವರ ಧ್ವನಿಯನ್ನು ಕೇಳುವುದು ಮತ್ತು ಅಭಿವೃದ್ಧಿ ಯೋಜನೆಗಳಲ್ಲಿ ಅವರನ್ನು ಒಳಪಡಿಸುವುದು ನಮ್ಮ ಅದ್ಯ ಕರ್ತವ್ಯ ಎಂದು ರಾಂಪುರ ಗ್ರಾಮ ಪಂಚಾಯತಿ ಕಾರ್ಯದರ್ಶಿ ಬಸವರಾಜ ಪಟ್ಟಣ್ಣಶೆಟ್ಟಿ ಹೇಳಿದರು.
ತಾಲೂಕಿನ ರಾಂಪುರ ಗ್ರಾಮದಲ್ಲಿ, ಗ್ರಾಮ ಪಂಚಾಯಿತಿ ಹಾಗೂ ಸಂಗಮ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆಯಲ್ಲಿ ಮಾತನಾಡಿ, ಈ ಸಭೆಯ ಉದ್ದೇಶ ಮಕ್ಕಳಿಗೆ ತಮ್ಮ ಅಭಿಪ್ರಾಯಗಳು ಮತ್ತು ಅಗತ್ಯಗಳನ್ನು ವ್ಯಕ್ತಪಡಿಸಲು, ಹಾಗೂ ಸ್ಥಳೀಯ ಆಡಳಿತದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಲು ವೇದಿಕೆಯನ್ನು ಒದಗಿಸುವುದು ಎಂದರು.
ಫಾ. ಸಂತೋಷ್‌ರವರು ಮಾತನಾಡಿ ಪ್ರತಿಯೊಂದು ಮಗುವಿಗೂ ಬದುಕು, ಅಭಿವೃದ್ಧಿ, ರಕ್ಷಣೆ ಮತ್ತು ಪಾಲ್ಗೊಳ್ಳುವ ಹಕ್ಕುಗಳಿವೆ. ಗ್ರಾಮ ಪಂಚಾಯಿತಿ ಮತ್ತು ಸಮುದಾಯವು ಮಕ್ಕಳ ಧ್ವನಿಯನ್ನು ಗೌರವಿಸಬೇಕು ಎಂದು ಹೇಳಿದರು.
ಸಭೆಯಲ್ಲಿ 150 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಶಿಕ್ಷಣ, ಆರೋಗ್ಯ, ಮಕ್ಕಳ ರಕ್ಷಣೆ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಶಾಲೆಯ ಕಟ್ಟಡದ ದುರಸ್ತಿ, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ಹಾಗೂ ಆಟದ ಮೈದಾನದ ನಿರ್ಮಾಣದ ಅಗತ್ಯವನ್ನು ಒತ್ತಿ ಹೇಳಿದರು. ಅಧಿಕಾರಿಗಳು ಮಕ್ಕಳ ಸಲಹೆಗಳನ್ನು ಗ್ರಾಮಾಭಿವೃದ್ಧಿ ಯೋಜನೆಗಳಲ್ಲಿ ಒಳಪಡಿಸುವ ಭರವಸೆ ನೀಡಿದರು.
ನಾಗೇಂದ್ರ ಎಸ್. ರಜಪೂತ್, ಶೋಭಾ ಪಾಟೀಲ, ಶಾಲಾ ಶಿಕ್ಷಕ, ಶಿಕ್ಷಕಿಯರು ಮತ್ತು ಫಾ. ಸಂತೋಷ್ ನಿರ್ದೇಶಕರು ಸಂಗಮ ಸಂಸ್ಥೆ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಮಕ್ಕಳೇ ವಹಿಸಿಕೊಂಡಿದ್ದು, ಆತ್ಮವಿಶ್ವಾಸದಿಂದ ಕಾರ್ಯಕ್ರಮವನ್ನು ಮುನ್ನಡೆಸಿದರು. ಸಭೆಯ ಅಂತ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲ್ಗೊಳ್ಳುವಿಕೆಗೆ ಪ್ರತಿಜ್ಞೆ ತೆಗೆದುಕೊಳ್ಳಲಾಯಿತು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 