ಸಿರುಗುಪ್ಪ

ಮಕ್ಕಳು ದೇಶದ ಉತ್ತಮ ನಾಗರಿಕರಾಗಿ ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ

ಮಕ್ಕಳು ದೇಶದ ಉತ್ತಮ ನಾಗರಿಕರಾಗಿ ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ

ಸಿರುಗುಪ್ಪ : ಬಾಲ್ಯದಲ್ಲಿ ಆಟವಾಡುತ್ತಾ ತನ್ನ ಜೊತೆಗಾರರೊಂದಿಗೆ ಶಾಲೆಗೆ ಹೋಗಿ ಕಲಿಯಬೇಕಾದ ಮಕ್ಕಳು ಹಲವಾರು ಕಾರಣ ಹಾಗೂ ಸಮಸ್ಯೆಗಳಿಂದ ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ ಇದು ಸಾಮಾಜಿಕ ಪಿಡುಗು ಎಂದು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ಹಾಜಿ ಹುಸೇನ್ ಸಾಬ್ ಯಾದವಾಡ ಹೇಳಿದರು ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂ ಗಣದಲ್ಲಿ ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ತಾಲೂಕ್ ಕಾನೂನು ಸೇವಾ ಸಮಿತಿ ವಕೀಲರ ಸಂಘ ಕಾರ್ಮಿಕ ಇಲಾಖೆ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪೊಲೀಸ್ ಇಲಾಖೆ ಆರೋಗ್ಯ ಇಲಾಖೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ನಗರ ಸಭಾ ಸಹಭಾಗಿತ್ವದಲ್ಲಿ ಆಯೋಜಿಸಿದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಕಾರ್ಯಕ್ರಮಕ್ಕೆ ಹಸಿರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡುತ್ತಾ ಮಕ್ಕಳು ಕಟ್ಟಡಗಳ ಕೆಲಸಗಳಲ್ಲಿ ಅಂಗಡಿ ಮಳಿಗೆಗಳಲ್ಲಿ ಗಾರ್ಮೆಂಟ್  ಗಳಲ್ಲಿ ಬೇಕರಿ ಗ್ಯಾರೇಜ್ ಹೋಟೆಲ್  ಕಾರ್ಖಾನೆಗಳಲ್ಲಿ ದೊಡ್ಡ ಮನೆಗಳಲ್ಲಿ ಕೆಲಸದ ಅಳುಗಳಾಗಿ ಕೆಲಸ ಮಾಡುವುದು ಅಪರಾಧವಾಗಿದೆ ಕಾರಣ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಕೆಲವೊಮ್ಮೆ ತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ ಹಾಗಾಗಿ ಬಾಲಕಾರ್ಮಿ ಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಬಾಲಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಬಾಲ ಕಾರ್ಮಿಕ  ವಿರೋಧಿ ದಿನವನ್ನು ಆಚರಿಸಲಾಗುತ್ತದೆ ಎಂದು ಅವರು  ತಿಳಿಸಿದರು ತಹಸಿಲ್ದಾರ್ ಎನ್ ಆರ್ ಮಂಜುನಾಥ ಸ್ವಾಮಿ ಅವರು ಮಾತನಾಡಿ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕ ರಾಗಬೇಕು ಎಂಬುದು ಈ ದಿನದ ಉದ್ದೇಶವಾಗಿದೆ ಎಂದರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಗುರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಎ ಗಾದಿಲಿಂಗಪ್ಪ , ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕಿ ಬಿ ರಾಜೇಶ್ವರಿ, ಜಿಲ್ಲಾ ಸಾಕ್ಷರತಾ ಕಾರ್ಯಕಾರಿ ಸದಸ್ಯ ಅಬ್ದುಲ್ ನಬಿ, ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ ಯಾದವ್, ಕಾರ್ಮಿಕ ಇಲಾಖೆ ನಿರೀಕ್ಷಕ ಮಂಜುನಾಥ ತೊಂಡಿಹಾಳ, ತಾಲೂಕು ಕಾರ್ಮಿಕ ಇಲಾಖೆ ಅಧಿಕಾರಿ ದಾದಾ ಖಲಂದರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಪ್ರದೀಪ್, ವಕೀಲರ ಸಂಘದ ಪದಾಧಿಕಾರಿಗಳು ಶಿಕ್ಷಕರು ಮಕ್ಕಳು ಇದ್ದರು 

ಸುದ್ದಿ ಓದಿ