ಮಕ್ಕಳು ಸರಕಾರದ ಸೌಲಭ್ಯಗಳ ಸದ್ಬಳಕೆ ಮಾಡಿಕೊಳ್ಳಿ: ಛಪ್ಪರಬಂದ
ಇಂಡಿ: ವಿದ್ಯಾರ್ಥಿಗಳು ಸರಕಾರದಿಂದ ದೊರೆಯುವ ಸವಲತ್ತುಗನ್ನು ಸದ್ಬಳಕೆ ಮಾಡಿಕೊಂಡು ಗುಣಮಟ್ಟದ ಶಿಕ್ಷಣ ಕಲಿಯುವ ನಿಟ್ಟಿನಲ್ಲಿ ಸ್ವಾಭಿಮಾನದ ಬದಕು ಸಾಗಿಸಲು ಮುಂದಾಗಬೇಕು ಎಂದು ಸಿ.ಆರ್.ಪಿ. ಬಿ.ಡಿ. ಛಪ್ಪರಬಂದ ಹೇಳಿದರು.
ಅವರು ಬುಧವಾರ ತಾಲೂಕಿನ ಹಿರೇರೂಗಿ ಗ್ರಾಮದ ಯು.ಬಿ.ಎಸ್. ಶಾಲೆಯಲ್ಲಿ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳು ಸರಕಾರದ ಸೌಲಭ್ಯಗಳ ಸದ್ಬಳಕೆ ಮಾಡಿ ಕಷ್ಟಪಟ್ಟು ಓದಿ ಮುಂದೆ ಬರುವ ಮೂಲಕ ಹೆತ್ತವರಿಗೆ ಗುರು-ಹಿರಿಯರಿಗೆ ನಮ್ಮ ತಾಲೂಕಿಗೆ ಹಾಗೂ ಜಿಲ್ಲೆಗೆ ಒಳ್ಳೆಯ ಹೆಸರು ತಂದು ಕೊಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಶಿಕ್ಷಕರು ಮಕ್ಕಳ ಸರ್ವೋತೋಮುಖ ಅಭಿವೃದ್ಧಿಗೆ ಪೂರಕವಾದ ತಮ್ಮ ದೈನಂದಿನ ಪಾಠ ಕಲಿಸುವ ಜತೆ ಇಂದಿನ ಸ್ಪರ್ಧಾತ್ಮಕ ಜಗತಿಗೆ ತಕ್ಕಂತೆ ವಿದ್ಯಾರ್ಥಿಗಳನ್ನು ತಯಾರು ಮಾಡುವ ಮಹತ್ವದ ಜವಾಬ್ದಾರಿ ನಿಭಾಯಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕ ಎ.ಎಂ. ಬೆದ್ರೇಕರ, ಶಿಕಕ್ಷಕರ ಜತೆಗೆ ವಿದ್ಯಾರ್ಥಿಗಳು ಫೋಷಕರು ಸಹ ಮಕ್ಕಳ ಕಲಿಕೆಗೆ ಆಸಕ್ತಿ ತೋರಿಸಬೇಕು. ಮಕ್ಕಳಿಗಾಗಿ ಆಸ್ತಿ ಮಾಡುವುದು ಬೇಡ. ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಲು ಶ್ರಮಿಸಬೇಕು ಎಂದು ಹೇಳಿದರು.
ಎಸ್.ಎಸ್. ಅರಬ ಸೇರಿದಂತೆ ಅನೇಕ ಶಾಲಾ ಮಕ್ಕಳು ಉಪಸ್ಥಿತರಿದ್ದರು.