ಶಿಕ್ಷಣದ ಜೊತೆಗೆ ಮಕ್ಕಳಿಗೆ ಸಂಸ್ಕೃತಿ ಅರಿವು ಅಗತ್ಯ: ಕೋಟ್ರೇಶ್
Children need an understanding of culture alongside education: Kotraesh
ಲೋಕದರ್ಶನ ವರದಿ
ಬಳ್ಳಾರಿ, ಜು.30: ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ನಮ್ಮ ಸಂಸ್ಕೃತಿ, ಕಲೆ ಹಾಗೂ ಪರಂಪರೆಯ ಅರಿವು ಬೆಳೆಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಬೇಕು ಎಂದು ಎಚ್.ಎಸ್.ಜಿ. ವಿದ್ಯಾಮಂದಿರದ ಪ್ರಾಂಶುಪಾಲ ಕೋಟ್ರೇಶ್ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ತೋರಣಗಲ್ಲಿನ ಜಿಂದಾಲ್ ವಿದ್ಯಾಮಂದಿರದ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ’ಚಿಗುರು’ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
"ಸಂಸ್ಕೃತಿ ಉಳಿದರೆ ನಾಡು ಉಳಿಯುತ್ತದೆ. ನಮ್ಮ ದೇಶದ ಸಂಸ್ಕೃತಿಗೆ ಕಲೆ, ನೃತ್ಯ ಹಾಗೂ ಜನಪದ ಸಾಹಿತ್ಯ ಅಪಾರ ಕೊಡುಗೆ ನೀಡಿವೆ. ಇಂತಹ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ" ಎಂದು ಅವರು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ ಅನೇಕ ಪ್ರತಿಭಾವಂತ ಕಲಾವಿದರಿದ್ದು, ಅವರಿಗೆ ಸೂಕ್ತ ವೇದಿಕೆ ಹಾಗೂ ಅವಕಾಶ ಕಲ್ಪಿಸುವ ಅಗತ್ಯವಿದೆ. ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಸಂಸ್ಕೃತಿ ಮತ್ತು ಕಲೆಯ ಬಗ್ಗೆ ಆಸಕ್ತಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಜಿಂದಾಲ್ ವಿದ್ಯಾಮಂದಿರದ ಪ್ರಾಂಶುಪಾಲ ಕೆ.ವಿ. ಶ್ರೀನಿವಾಸನ್ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿ ಜಿಲ್ಲೆಯ ಕಲಾವಿದರ ಪ್ರತಿಭೆಗೆ ಉತ್ತೇಜನ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕವೀಂದ್ರ ಜೆ. ಅವರಿಂದ ತಬಲಾ ಸೋಲೋ, ಓ.ಎಂ. ವರ್ಷಿಣಿ ಅವರಿಂದ ಸುಗಮ ಸಂಗೀತ, ಬಳ್ಳಾರಿ ಕಲಾಂಜಲಿ ಕಲಾ ಟ್ರಸ್ಟ್ ವಿದ್ಯಾರ್ಥಿಗಳಿಂದ ಸಮೂಹ ನೃತ್ಯ, ಪ್ರಿಯಾಂಕಾ ಎಂ. ಜೋಶಿ ಅವರಿಂದ ಜನಪದ ಗೀತೆಗಳು, ಸುಮಲತಾ ಅವರಿಂದ ಏಕಪಾತ್ರಾಭಿನಯ ಹಾಗೂ ಡಿ. ಕೃಷ್ಣಮೂರ್ತಿ ಮತ್ತು ತಂಡದಿಂದ ’ವಿದ್ಯೆ ತಂದ ಸಂಪತ್ತು’ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಜಿಂದಾಲ್ ವಿದ್ಯಾಮಂದಿರದ ಉಪ ಪ್ರಾಂಶುಪಾಲ ಅಂಬಳಿ ನಾಯರ್, ಜಿಂದಾಲ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಕುಮಾರಸ್ವಾಮಿ, ಸಂಗೀತ ಗಾಯಕ ಕೋಟ್ರೇಶ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 