ಕುಷ್ಟಗಿ

ಕೋವಿಡ್ ವ್ಯಾಕ್ಸಿನ್ ಪಡೆಯುವದರಿಂದ ಮಕ್ಕಳು ಭಯಪಡುವ ಅಗತ್ಯವಿಲ್ಲ: ಶಾಸಕ ಅಮರೇಗೌಡ

ಕೋವಿಡ್ ವ್ಯಾಕ್ಸಿನ್ ಪಡೆಯುವದರಿಂದ ಮಕ್ಕಳು ಭಯಪಡುವ ಅಗತ್ಯವಿಲ್ಲ: ಶಾಸಕ ಅಮರೇಗೌಡ

ಲೋಕದರ್ಶನ ವರದಿ  

ಕುಷ್ಟಗಿ 03: ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೋವಿಡ್ ವ್ಯಾಕ್ಸಿನ್ ಲಸಿಕೆಯನ್ನು ಪಡೆಯುವದರಿಂದ ಮಕ್ಕಳು ಭಯಪಡುವ ಅಗತ್ಯವಿಲ್ಲ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದರು.  

ಜಿಲ್ಲಾಡಳಿತ, ತಾಲೂಕು ಆರೋಗ್ಯ ಇಲಾಖೆ, ಜಿಲ್ಲಾ ಪಂಚಾಯಿತಿ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ಬೆಳಗ್ಗೆ ತಾಲೂಕಿನ ತಳವಗೇರಿಯ ಆದರ್ಶ ಮಹಾ ವಿದ್ಯಾಲಯ ಹಾಗೂ ಕುಷ್ಟಗಿ ಪಟ್ಟಣದ ಸರಕಾರಿ ಬಾಲಕೀಯರ ಪ್ರೌಢ ಶಾಲೆಯ 15 ರಿಂದ 19 ವರ್ಷದ ಒಳಗಿನ ಶಾಲಾ ಮಕ್ಕಳಿಗೆ ಉಚಿತ ಕೋವಿಡ್ ವ್ಯಾಕ್ಸಿನ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೋವಿಡ್ ರೋಗದ ಕುರಿತು ನಿಷ್ಕಾಳಜೀವಹಿಸದೇ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ವ್ಯಾಕ್ಸಿನ್ ಲಸಿಕೆ ಪಡೆದು ಆರೋಗ್ಯದಿಂದ ಇರಬೇಕು ಎಂದು ಸಲಹೆ ನೀಡಿದರು.  

ನಾವುಗಳು ಸದ್ಯದ ಪರಿಸ್ಥಿತಿಯಲ್ಲಿ ಎರಡು ಲಸಿಕೆಗಳನ್ನು ಪಡೆದಕೊಂಡಿದ್ದೇವೆ ಲಸಿಕೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಬೀರಿಲ್ಲ   

ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಲಸಿಕೆಯನ್ನು ನೀಡಬೇಕು ಎಂದು ತಾಕೀತು ಮಾಡಿದರು.  

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಗಂಗಾಧರ ಹಿರೇಮಠ, ತಾಲೂಕು ಪಂಚಾಯಿತಿ ಇಓ ಜಯರಾಂ ಚೌಹಾಣ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ, ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ.ಕೆ.ಎಸ್ ರಡ್ಡಿ, ಸರಕಾರಿ ಬಾಲಕೀಯರ ಪ್ರೌಢ ಶಾಲೆಯ ಉಪ ಪ್ರಾಚಾರ್ಯ ಶಿವಯೋಗೆಪ್ಪ ರೇವಡಕುಂದಿ, ಎಸ್‌. ಡಿ.ಎಮ್‌. ಸಿ ಅಧ್ಯಕ್ಷ  ಕೇದಾರನಾಥ ತುರಕಾಣಿ, ತಳವಗೇರಿಯ ಆದರ್ಶ ವಿದ್ಯಾಲಯ ಮುಖ್ಯೋಪಾಧ್ಯಾಯ ಸಂಗಪ್ಪ ಕಿರೇಸೂರ, ಎಸ್‌. ಡಿ.ಎಮ್‌. ಸಿ ಅಧ್ಯಕ್ಷ ಪಕ್ಕೀರ​‍್ಪ ಕರಡಕಲ್ ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.  

ನಂತರ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಂದ ಶಾಲೆಯ ಮಕ್ಕಳಿಗೆ ಲಸಿಕೆ ಹಾಕಲಾಯಿತು. 


ಸುದ್ದಿ ಓದಿ