ಸರ್ವಜ್ಞ ವಿದ್ಯಾಪೀಠದಲ್ಲಿ ಮಕ್ಕಳ ದಿನ ಆಚರಣೆ
ಲೋಕದರ್ಶನ ವರದಿ
ತಾಳಿಕೋಟಿ 14: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಪ್ರಯುಕ್ತ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಶನಿವಾರ ಆಚರಿಸಲಾಯಿತು. ಮಕ್ಕಳಿಗೆ ಕೇಕ್ ಕತ್ತರಿಸಿ ಸಿಹಿ ತಿನಿಸುವುದರ ಮೂಲಕ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಮಕ್ಕಳಿಂದ ವಿವಿಧ ಕಿರು ನಾಟಕಗಳು, ಹಾಸ್ಯ ಚಟಾಕಿಗಳು, ಕ್ರೀಡಾ ಸ್ಪರ್ಧೆಗಳನ್ನು ಏರಿ್ಡಸಲಾಗಿತ್ತು.ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಸಿದ್ದನಗೌಡ ಬ ಮಂಗಳೂರ. ಮುಖ್ಯ ಗುರುಗಳಾದ ಸಂತೋಷ ಪವಾರ, ರಾಜು ಜವಳಗೇರಿ, ದೈಹಿಕ ಶಿಕ್ಷಕರಾದ ಬಸವರಾಜ ಚಳ್ಳಗಿ,ಶಾಂತಗೌಡ ಬಿರಾದಾರ, ವಿದ್ಯಾರ್ಥಿಗಳು ಮತ್ತು ಸರ್ವ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.