ರಾಣೆಬೆನ್ನೂರ

ರಾಣೇಬೆನ್ನೂರ ಕಟ್ಟಡ ಕಾರ್ಮಿಕರ ಸಂಘದಲ್ಲಿ ಮಕ್ಕಳ ದಿನಾಚರಣೆ

ರಾಣೇಬೆನ್ನೂರ ಕಟ್ಟಡ ಕಾರ್ಮಿಕರ ಸಂಘದಲ್ಲಿ ಮಕ್ಕಳ ದಿನಾಚರಣೆ


ರಾಣೇಬೆನ್ನೂರು:15 ಇಲ್ಲಿನ ಮೆಡ್ಲೇರಿ ರಸ್ತೆ ಗಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನದ ಬಳಿಯ ಶ್ರೀ ಮಾಯಮ್ಮ ದೇವಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಕಚೇರಿಯಲ್ಲಿ ಶನಿವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.  

ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಮರಡೆಪ್ಪ ಚಳಗೇರಿ, ಪ್ರಧಾನ ಕಾರ್ಯದರ್ಶಿ ಶೋಭಾ ಮುದೇನೂರ, ಖಜಾಂಚಿ ಚಂದ್ರ​‍್ಪ ಬಣಕಾರ, ಜಿಲ್ಲಾ ಸಂಚಾಲಕ ಪರಶುರಾಮ ಕುರುವತ್ತಿ, ರಾಮಪ್ಪ ಕಜ್ಜರಿ, ಸೇರಿದಂತೆ ಸಂಘದ ಸದಸ್ಯರು ಕಾರ್ಮಿಕರು ಉಪಸ್ಥಿತರಿದ್ದರು. 


ಸುದ್ದಿ ಓದಿ