ಸಿಂಧಗಿ

ಕಾವ್ಯ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ: ಹಕ್ಕು, ಶಿಕ್ಷಣದ ಕುರಿತು ಜಾಗೃತಿ

ಕಾವ್ಯ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ: ಹಕ್ಕು, ಶಿಕ್ಷಣದ ಕುರಿತು ಜಾಗೃತಿ

ಲೋಕದರ್ಶನ ವರದಿ 


ಸಿಂದಗಿ  17; ಇಂದಿನ ಮಕ್ಕಳೆ ನಾಳಿನ ಪ್ರಜೆಗಳು, ಮಕ್ಕಳ ದಿನಾಚರಣೆ ಮಾಡುವ ಮೂಲಕ ಅವರ ಹಕ್ಕುಗಳು, ಆರೈಕೆ ಮತ್ತು ಶಿಕ್ಷಣದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಪಂಡಿತ ಜವಾಹರಲಾಲ ನೆಹರು ಅವರ ಮರಣದ ನಂತರ, ಅವರ ಜನ್ಮದಿನದ ಸವಿನೆನಪಿಗಾಗಿ ನವೆಂಬರ್ 14 ರಂದು ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತದೆ ಎಂದು ಶಿಕ್ಷಕ ಸಾಹಿತಿ ಎಂ.ಆರ್‌.ಡೋಣ ಹೇಳಿದರು. 

       ಪಟ್ಟಣದ ಕಾವ್ಯ ಸಮೂಹ ಶಿಕ್ಷಣ ಸಂಸ್ಥೆಯ ಕಾವ್ಯ ಪ್ರಾಥಮಿಕ ಹಾಗೂ ಪ್ರೌಡಶಾಲೆಯಲ್ಲಿ  ಹಮ್ಮಿಕೊಂಡ ಮಕ್ಕಳ ದಿನಾಚರಣೆಯಲ್ಲಿ ಮಾತನಾಡಿದರು.   

         ಪತ್ರಕರ್ತ ಪಂಡಿತ ಯಂಪೂರೆ ಮಾತನಾಡಿ, 1947 ರಿಂದ 1964 ರವರೆಗೆ ಅಂದರೆ ಅವರ ಮರಣದವರೆಗೂ  ಪಂಡಿತ ಜವಾಹರಲಾಲ್ ನೆಹರು ರವರು ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ಎರಡು ಅವಧಿಯಲ್ಲಿ ಸೇವೆ ಸಲ್ಲಿಸಿದ್ದರು. ಮಕ್ಕಳು ಪ್ರೀತಿಯಿಂದ ನೆಹರು ರವರನ್ನು ಚಾಚಾ ನೆಹರು ಎಂದು ಕರೆಯುತ್ತಿದ್ದರು.

             ದೇಶದ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ಪೂರೈಸಬೇಕೆಂಬುದು ಅವರ ಧೈಯವಾಗಿತ್ತು. ಆದ್ದರಿಂದ ಅವರ ಸವಿನೆನಪಿಗಾಗಿ ಅವರ ಜನ್ಮ ದಿನಾಂಕದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ದಿನದಂದು ಭಾರತದಾದ್ಯಂತ ಮಕ್ಕಳಿಗಾಗಿ ಮತ್ತು ಅನೇಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದರು. 

       ಚಿಕ್ಕ ಮಕ್ಕಳ ತಜ್ಞೆ ಡಾ. ಸರೋಜನಿ ದಾನಗೊಂಡ ಮಾತನಾಡಿ, ಭಾರತದಲ್ಲಿ ಪ್ರತಿವರ್ಷ ನವೆಂಬರ್ 14 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಭಾರತದಲ್ಲಿ ಮಾತ್ರವಲ್ಲದೇ ಜಗತ್ತಿನಾದ್ಯಂತ ಮೊದಲಿಗೆ ನವೆಂಬರ್ 20 ರಂದು ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿತ್ತು. ವಿಶ್ವಸಂಸ್ಥೆಯು ಸಾರ್ವತ್ರಿಕ ಮಕ್ಕಳ ದಿನ ಎಂದು ಈ ದಿನವನ್ನು ಘೋಷಣೆ ಮಾಡಿತ್ತು.

           ಆದರೆ 1964 ರ ನಂತರ ಭಾರತದಲ್ಲಿ ಮಕ್ಕಳ ದಿನಾಚರಣೆ ನವೆಂಬರ್ 14 ರಂದು ಆಚರಣೆ ಆಗುತ್ತಿದೆ ಮಕ್ಕಳು ಪಾಠದ ಜೊತೆಗೆ ಆಟಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಇದರಿಂದ ಶಾರೀರೀಕ ಬೆಳವಣಿಗೆ ಮತ್ತು ಬುದ್ಧಿಶಕ್ತಿ ಉತ್ತಿರಣಗೊಳ್ಳುತ್ತದೆ. ಇಂದಿನ ಕುಲಷಿತ ಆಹಾರ ಸೇವನೆಗೆ ಕಡಿವಾಳ ಹಾಕಿ ಸರಕಾರ ನೀಡುವ ಲಸಿಕೆಗಳನ್ನು ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು. 

        ಸಂಸ್ಥೆಯ ಸಂಚಾಲಕಿ ಕಾಂಚನಾ ನಾಗರಬೇಟ್ಟ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಕುಂತಲಾ ಹಿರೇಮಠ ವೇದಿಕೆ ಮೇಲಿದ್ದರು. ಆಸ್ಮಾ ಮಸಳಿ ನಿರೂಪಿಸಿದರು. 


ಸುದ್ದಿ ಓದಿ