ಮಕ್ಕಳು ವಿಜ್ಞಾನದ ಪ್ರಯೋಗಗಳ ಕಡೆಗೆ ಆಸಕ್ತಿ ವಹಿಸಿ : ಎಸ್. ಬಿ. ಅವಟಿ
Children should be interested in science experiments: S. B. Avati
ದೇವರಹಿಪ್ಪರಗಿ 28 : ತಾಲೂಕಿನ ಕಡ್ಲೆವಾಡ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತರು, ವಿಜಯಪುರ ಬಸವೇಶ್ವರ ಪ್ರೌಢಶಾಲೆ ಮುಖ್ಯ ಗುರುಗಳಾದ ಎಸ್. ಬಿ. ಅವಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳು ವಿಜ್ಞಾನದ ಪ್ರಯೋಗಗಳ ಕಡೆಗೆ ಆಸಕ್ತಿ ವಹಿಸಿ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು, ಸರ್ ಸಿ.ವಿ. ರಾಮನ್ ಅವರಿಗೆ ವಿಜ್ಞಾನದ ಕಡೆಗೆ ಇರುವ ಕುತೂಹಲ ಹಾಗೂ ರಾಮನ್ ಪರಿಣಾಮದ ಬಗ್ಗೆ ತಿಳಿಸಿದರು. ಸಂದರ್ಭದಲ್ಲಿ ಶಾಲೆಯ ವಿಜ್ಞಾನ ಶಿಕ್ಷಕಿಯರಾದ ಸುನಿತಾ ಕೋರವಾರ ಮಕ್ಕಳಿಂದ ಹಲವಾರು ವಿಜ್ಞಾನದ ಪ್ರಯೋಗಗಳನ್ನು ಮಾಡಿಸಿದರು ಶಾಲೆಯ ಮಕ್ಕಳು ತುಂಬಾ ಕ್ರಿಯಾಶೀಲತೆಯಿಂದ ವಿಭಿನ್ನ ವಿಶಿಷ್ಟ ರೀತಿಯ ಪ್ರಯೋಗಗಳನ್ನು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಎ.ವಿ. ತಳಕೇರಿ ಹಾಗೂ ಜಿ. ಬಿ. ಶಿವಣಗಿ, ವೆಂಕಣ್ಣ ಗಣಜಲಿ, ಕೆ.ಬಿ.ಬಡಿಗೇರ, ಅಜೀಜ ಕಂಬಾರ, ಕುಮಾರಿ ಅಕ್ಷತಾ ಬಿರಾದಾರ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 