ಮಕ್ಕಳು ಪೋಕ್ಸೋ ಹಾಗೂ ಬಾಲ್ಯವಿವಾಹದ ನಿಷೇಧ ಕಾಯ್ದೆಯ ಬಗ್ಗೆ ತಿಳಿದುಕೊಳ್ಳಬೇಕು

ಮಕ್ಕಳು ಪೋಕ್ಸೋ ಹಾಗೂ ಬಾಲ್ಯವಿವಾಹದ ನಿಷೇಧ   ಕಾಯ್ದೆಯ ಬಗ್ಗೆ ತಿಳಿದುಕೊಳ್ಳಬೇಕು   Children should know about POCSO and the Prohibition of Child Marriage Act

ಯರಗಟ್ಟಿ  07: ಸಾಮಾಜಿಕ ಜಾಲತಾಣದ ಪರಿಣಾಮದಿಂದಾಗಿ ಪ್ರಸ್ತುತ ಮಕ್ಕಳ ಮೇಲಿನ ಅಪರಾಧಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು, ಎಲ್ಲ ಮಕ್ಕಳು ಪೋಕ್ಸೋ ಹಾಗೂ ಬಾಲ್ಯವಿವಾಹದ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆಯ ಬಗ್ಗೆ ತಿಳಿದುಕೊಳ್ಳಬೇಕು ಎಂದು ನ್ಯಾಯವಾದಿ ಎಂ. ಎಂ.ಮಡಿವಾಳರ ತಿಳಿಸಿದರು.ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಪಟ್ಟಣದ ಬಸವೇಶ್ವರ ಪ್ರೌಢ ಶಾಲೆಯಲ್ಲಿ ಶಾಲೆಯಲ್ಲಿ ಆಯೋಜಿಸಿದ್ದ ಪ್ರೌಢಶಾಲೆಯ ಹೆಣ್ಣು ಮಕ್ಕಳಿಗೆ ಬಾಲ್ಯ ವಿವಾಹ ನಿಷೇಧ ಹಾಗೂ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಂತರ ಅಂಗನವಾಡಿ ಮೇಲ್ವಿಚಾರಕಿ ಎಸ್‌. ಆರ್‌. ತೆರ್ಲಿ ಮಾತನಾಡಿದ ಅವರು ಸಾಮಾಜಿಕ ಜಾಲತಾಣಗಳ ಆಕರ್ಷಷಣೆಗೆ ಒಳಗಾಗಿ ಇತ್ತೀಚೆಗೆ ಚಿಕ್ಕ ವಯಸ್ಸಿನ ಮಕ್ಕಳು ಮನೆ ಬಿಟ್ಟು ಹೋಗಿ ಮದುವೆಯಾಗುತ್ತಿರುವುದು ಹಾಗೂ ಇತರೆ ಅಪರಾಧಗಳನ್ನು ಕಾಣುತ್ತಿದ್ದೇವೆ. 2023-24ರಲ್ಲಿ ನಮ್ಮ ಜಿಲ್ಲಾ ವ್ಯಾಪ್ತಿಯಲ್ಲೇ ಹಲವಾರು ಜನ ಬಾಲ ಗರ್ಭಿಣಿಯರ​‍್ರಕರಣ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳು ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.ಕಾನೂನು ನಮ್ಮೆಲ್ಲರಿಗೆ ಹಲವು ಮೂಲಭೂತ ಹಕ್ಕುಗಳನ್ನು, ಸ್ವಾತಂತ್ರಂವನ್ನು ನೀಡಿದೆ.

ಅದರ ದುರ್ಬಳಕೆ ಆಗಬಾರದು. ದುರ್ಬಳಕೆಯನ್ನು ತಡೆಯಲು ಕಾಯ್ದೆಗಳ ರೂಪದಲ್ಲಿ ಕೆಲವು ನಿಬಂರ್ಧಗಳನ್ನು ಹಾಕಲಾಗಿದೆ.ಕಾನೂನಿನ ಕಣ್ಣಿನಲ್ಲಿ ನಾವೆಲ್ಲರೂ ಸಮಾನರು. ಸಂವಿಧಾನದಲ್ಲೂ ಅಡಕವಾಗಿದೆ. ನಮ್ಮ ನೆಲದ ಕಾನೂನು ಸಂವಿಧಾನ, ಇದೇ ನಮ್ಮ ತಳಹದಿ ಮತ್ತು ಬುನಾದಿ, ನಾವೆಲ್ಲರು ನಮ್ಮ ನೆಲದ ಕಾನೂನನ್ನು ಅನುಸರಿಸಬೇಕು. ಕಾನೂನು ಎಂದರೆ ಒಂದು ಸಾಮಾನ್ಯ ಜ್ಞಾನ. ಅದನ್ನು ನಾವೆಲ್ಲರೂ ಅರಿತಿರಬೇಕು ಎಂದರು.ಪೋಕ್ಸ್‌ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆಗಳ ಬಗ್ಗೆ ಎಲ್ಲ ಮಕ್ಕಳಿಗೆ ಅರಿವು ಇರಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಜ್ಞಾನ ಇರಬೇಕು.

ಯಾವುದೋ ಉದ್ದೇಶದಿಂದ ಪುರುಷ/ಗಂಡು ಮಕ್ಕಳು ಹೆಣ್ಣು ಮಕ್ಕಳನ್ನು ಮುಟ್ಟುವುದು, ಸ್ವರ್ಶಿಸುವುದರ ಕುರಿತು ಜಾಗೃತೆಯಿಂದರಬೇಕು.ಪೋಕ್ಸ್‌ ಹಾಗೂ ಬಾಲ್ಯ ವಿವಾಹ ಕಾಯ್ದೆಗಳಡಿಯಲ್ಲಿ ಹೆಣ್ಣು ಮಕ್ಕಳಿಗೆ ಎಲ್ಲ ರೀತಿಯಲ್ಲಿ ರಕ್ಷಣೆ ಇದೆ. ಅದನ್ನು ಸರಿಯಾದ ಕ್ರಮದಲ್ಲಿ ಬಳಸಿಕೊಳ್ಳಬೇಕು. ಶಾಲೆ ತಮ್ಮ ಸುತ್ತಮುತ್ತಲಿನಲ್ಲಿ ಬ್ಯಾಡ್ ಟಚ್‌ನಂತಹ ಪ್ರಕರಣಗಳು ಅಥವಾ ಇಂತಹ ಅನುಭವವಾದರೆ ಶಾಲಾ ಶಿಕ್ಷಕರಿಗೆ ಅಥವಾ ತಂದೆ ತಾಯಿಗೆ ಕೂಡಲೇ ತಿಳಿಸಬೇಕು. ನಿಮ್ಮನ್ನು ರಕ್ಷಣೆ ಮಾಡುವ ಸಂಪೂರ್ಣ ಜವಾಬ್ದಾರಿ ಕಾನೂನು ಕೈಗೊಳುತ್ತದೆ ಎಂದು ಕಿವಿ ಮಾತು ಹೇಳಿದರು.

ಈ ವೇಳೆ ಸಂಸ್ಥೆಯ ಅಧ್ಯಕ್ಷರಾದ ಆರ್‌. ಜಿ. ದೇವರಡ್ಡಿ, ಉಪಾಧ್ಯಕ್ಷ ಮಂಜುನಾಥ ತಡಸಲೂರ, ಕಾರ್ಯದರ್ಶಿ ಎಸ್‌. ಬಿ. ಸಿದ್ನಾಳ, ಶಾಲಾ ಪ್ರಧಾನ ಗುರುಗಳಾದ ಬಿ. ಎಸ್‌. ಆಲದಕಟ್ಟಿ, ಅಂಗವಾಗಿ ಮೇಲ್ವಿಚಾರಕಿ ಎಸ್‌. ಆರ್‌. ತೆರ್ಲಿ, ಶಿಕ್ಷಕರಾದ ಎಸ್‌. ಜೆ. ಸತ್ತಿಗೇರಿ, ಆರ್‌. ಎಸ್‌. ಗಾಣಿಗೇರ, ಜಿ. ಆಯ್‌. ಡಮ್ಮಣಗಿ, ಎನ್‌. ಎಸ್‌. ಕಾಂಬಳೆ, ಎಲ್‌. ಎಸ್‌. ಹೊನ್ನಪ್ಪಗೋಳ, ಡಿ. ಎಮ್‌. ಪಾಟೀಲ, ಡಾ. ಕುಮಾರ ದಾಸರ, ಅಂಗನವಾಡಿ ಕಾರ್ಯಕರ್ತೆಯರಾದ ಜಿ. ಆರ್‌. ದಯನ್ನವರ, ಎಮ್‌. ಎ. ನದಾಫ, ಎಚ್‌. ಸಿ. ಹುಕ್ಕೇರಿ, ಲಕ್ಷ್ಮೀ ವಂಟಮೂರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.