ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ: ಪ್ರಧಾನಿ ಮೋದಿ ಮಧ್ಯಪ್ರವೇಶಿಸುವಂತೆ ನಿವೃತ್ತ ನ್ಯಾಯಾಧೀಶರು,ಅಧಿಕಾರಿಗಳು ಮನವಿ
ಪ್ರಧಾನಿ ನರೇಂದ್ರ ಮೋದಿ, ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ
ಶ್ರೀನಗರ 28: ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಹಾಗೂ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಬಂಧನ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ನಿವೃತ್ತ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಹಾಲಿ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಹೈಕೋರ್ಟ್‌ನ 68 ಮಂದಿ ನಿವೃತ್ತ ನ್ಯಾಯಮೂರ್ತಿಗಳು, ಐಎಎಸ್, ಐಪಿಎಸ್, ಐಆರ್‌ಎಸ್, ಐಐಎಸ್ ಹಾಗೂ ಐಎಫ್‌ಎಸ್ ಅಧಿಕಾರಿಗಳು ಚಿನ್ಮಯಿ ಕೃಷ್ಣದಾಸ್ ಅವರ ಬಂಧನ ಹಾಗೂ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್ ಎಂಬುವವರು ಈ ಪತ್ರವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕಪೋಲಕಲ್ಪಿತ ದೇಶದ್ರೋಹದ ಆರೋಪದ ಮೇಲೆ ಚಿನ್ಮಯಿ ಕೃಷ್ಣದಾಸ್ ಅವರನ್ನು ಬಂಧಿಸಲಾಗಿದೆ. ಈ ನಿರ್ಣಾಯಕ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆಯನ್ನು ಕೋರುತ್ತೇವೆ. ಮೋದಿ ನೇತೃತ್ವದ ಭಾರತ ಸರ್ಕಾರವು ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ರಕ್ಷಿಸಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು' ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.
ಅನ್ಯಾಯವಾಗಿ ಬಂಧಿಸಲ್ಪಟ್ಟಿರುವ ಚಿನ್ಮಯಿ ಕೃಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡುವುದು ಅತ್ಯಗತ್ಯ. ಅವರ ಮೇಲಿನ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಮತ್ತು ಶಾಂತಿಯುತವಾಗಿ ಪ್ರತಿಭಟಿಸುವ ಅವರ ಹಕ್ಕುಗಳನ್ನು ಎತ್ತಿಹಿಡಿಯಬೇಕು ಎಂದೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಬಾಂಗ್ಲಾದೇಶದ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ್ದಕ್ಕಾಗಿ ದೇಶದ್ರೋಹದ ಆರೋಪ ಎದುರಿಸುತ್ತಿರುವ ‘ಸಮ್ಮಿಲಿತ್ ಸನಾತನಿ ಜಾಗರಣ ಜೋತೆ’ ಎಂಬ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಅವರ ಜಾಮೀನು ಅರ್ಜಿಯನ್ನು ಬಾಂಗ್ಲಾ ದೇಶದ ನ್ಯಾಯಾಲಯ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಜೈಲಿಗೆ ಕಳುಹಿಸಲಾಗಿತ್ತು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 