ಚಿತ್ರದುರ್ಗದಲ್ಲಿ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ
ಚಿತ್ರದುರ್ಗ, ಮೇ 28, ಕೋಟೆ ನಾಡು ಚಿತ್ರದುರ್ಗದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆ ಆಗಿದೆ.ಚಳ್ಳಕೆರೆ ತಾಲ್ಲೂಕಿನ ಬಿಸಿಎಂ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿದ್ದ ವಲಸೆ ಕಾರ್ಮಿಕರ ಪೈಕಿ ಮತ್ತೆ ಆರು ಜನರಿಗೆ ಕೋವಿಡ್-19 ಇರುವುದು ಗುರುವಾರ ದೃಢಪಟ್ಟಿರುವುದು ಆರೋಗ್ಯ ಇಲಾಖೆ ಪ್ರಕಟಿಸಿದ ಮಾಹಿತಿಯಲ್ಲಿ ಬಹಿರಂಗಗೊಂಡಿದೆ.59 ವಲಸೆ ಕಾರ್ಮಿಕರಲ್ಲಿ 27 ಜನರಿಗೆ ಸೋಂಕು ತಗುಲಿದೆ. ತಮಿಳುನಾಡಿನ ಚೆನ್ನೈನಿಂದ ಉತ್ತರಪ್ರದೇಶಕ್ಕೆ ಕಂಟೇನರ್ ನಲ್ಲಿ ಹೊರಟಿದ್ದ ಕಾರ್ಮಿಕರನ್ನು ಪೊಲೀಸರು ತಡೆದು ಚಳ್ಳಕೆರೆಯಲ್ಲಿ ಕ್ವಾರಂಟೈನ್ ಮಾಡಿದ್ದರು. ಉತ್ತರಪ್ರದೇಶಕ್ಕೆ ಕಳುಹಿಸುವ ಸಿದ್ಧತೆಯಲ್ಲಿ ಇದ್ದಾಗ ಕಂಟೇನರ್ ಚಾಲಕನಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಿದಾಗ ಹಲವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ತಮಿಳುನಾಡುದಿಂದ ಜಿಲ್ಲೆಗೆ ಹಿಂದಿರುಗಿದ ರೋಗಿ ಸಂಖ್ಯೆ -2452 ರಿಂದ ರೋಗಿ ಸಂಖ್ಯೆ- 2457ರವರೆಗೆ ಸೋಂಕು ತಗುಲಿದೆ. ಸೋಂಕಿತರೆಲ್ಲರೂ 15,36,19,21,24,25 ವರ್ಷದ ಪುರುಷರಾಗಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 37ಕ್ಕೆ ಏರಿದೆ. 5 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಉಳಿದರವರಿಗೆ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 