ಚಿಟ್ಟಾ ವಾಡಿ-ಚೀಟ ಗ್ರಾಮದಲ್ಲಿ 3 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆಜನರ ಬಹುದಿನಗಳ ಕನಸಿಗೆ ಶೀಘ್ರದಲ್ಲೇ ಸಾಕಾರ
ಬೀದರ 04: ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಾ ವಾಡಿ-ಚೀಟ ಗ್ರಾಮದ ಮುಖ್ಯ ರಸ್ತೆಯಲ್ಲಿ ಸುಮಾರು ?3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸೇತುವೆ ಕಾಮಗಾರಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಈ ಸೇತುವೆ ನಿರ್ಮಾಣವು ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೊಸ ಮೈಲಿಗಲ್ಲಾಗಲಿದ್ದು, ಸ್ಥಳೀಯ ಜನರ ಬಹುದಿನಗಳ ಕನಸನ್ನು ನನಸಾಗಿಸುವ ಮಹತ್ವದ ಯೋಜನೆಯಾಗಿದೆ.ವರ್ಷಗಳಿಂದ ಮಳೆಗಾಲದಲ್ಲಿ ಈ ಭಾಗದ ಜನರು ಸಂಚಾರಕ್ಕೆ ತೀವ್ರ ತೊಂದರೆ ಅನುಭವಿಸುತ್ತಿದ್ದರು. ರಸ್ತೆ ಸಂಪರ್ಕ ಕಡಿತಗೊಂಡು ರೈತರು ತಮ್ಮ ಕೃಷಿ ಚಟುವಟಿಕೆಗಳಿಗೆ, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಗೂ ಸಾರ್ವಜನಿಕರು ತಮ್ಮ ದೈನಂದಿನ ಕೆಲಸಗಳಿಗೆ ತೆರಳಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸೇತುವೆ ನಿರ್ಮಾಣಕ್ಕೆ ಬೇಡಿಕೆ ಸಲ್ಲಿಸಿದ್ದರು.
ಈಗ ಸುಮಾರು ?3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಸೇತುವೆಯು ಚಿಟ್ಟಾ ವಾಡಿ, ಚಿಟ್ಟಾ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಉತ್ತಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಲಿದೆ. ವಿಶೇಷವಾಗಿ ಮಳೆಗಾಲದಲ್ಲಿ ಉಂಟಾಗುತ್ತಿದ್ದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದ್ದು, ರೈತರು ತಮ್ಮ ಕೃಷಿ ಉತ್ಪನ್ನಗಳನ್ನು ಸುಲಭವಾಗಿ ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗಲಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸುರಕ್ಷಿತವಾಗಿ ಸಂಚರಿಸಲು ಸಹ ನೆರವಾಗಲಿದೆ.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು, ಜನರ ಅಗತ್ಯತೆಗಳಿಗೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆದ್ಯತೆ ನೀಡಲಾಗುತ್ತಿದೆ.
ರಸ್ತೆ, ಸೇತುವೆ, ಕುಡಿಯುವ ನೀರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಅನುದಾನವನ್ನು ಸಮರ್ಕವಾಗಿ ಬಳಸಿಕೊಂಡು ಜನರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಚಿಟ್ಟಾ ್ಝ್ಣಳ್ತಹಿಸ್ತಳ್ಲಿಳ್ಣಿ ಸೇತುವೆ ನಿರ್ಮಾಣವು ಈ ಭಾಗದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ಹೇಳಿದರು.ಗ್ರಾಮಸ್ಥರು ಕೂಡ ಸಂತಸ ವ್ಯಕ್ತಪಡಿಸಿ, ಹಲವಾರು ವರ್ಷಗಳಿಂದ ಈ ಸೇತುವೆ ನಿರ್ಮಾಣಕ್ಕಾಗಿ ನಾವು ಕಾಯುತ್ತಿದ್ದೆವು. ಮಳೆಗಾಲದಲ್ಲಿ ಸಂಚಾರ ತುಂಬಾ ಕಷ್ಟಕರವಾಗುತ್ತಿತ್ತು. ಈಗ ಕಾಮಗಾರಿಗೆ ಚಾಲನೆ ದೊರೆತಿರುವುದು ಸಂತಸದ ಸಂಗತಿಯಾಗಿದೆ.
ಜನರ ಸಮಸ್ಯೆಯನ್ನು ಅರಿತು ಅಭಿವೃದ್ಧಿ ಕಾರ್ಯ ಕೈಗೊಂಡಿರುವ ಶಾಸಕರಿಗೆ ನಾವು ಕೃತಜ್ಞರಾಗಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಉದಯಕುಮಾರ ತೋರಣ, ಶಿವಕುಮಾರ ಸ್ವಾಮಿ, ಸಂಜುಕುಮಾರ ಮಾಶೆಟ್ಟಿ, ವೆಂಕಟರೆಡ್ಡಿ, ಅರುಣಕುಮಾರ, ಅನೀಲ ಗುನ್ನಳ್ಳಿ, ಜೋಸೆಫ್ ಕೊಡ್ಡೆಕರ್, ವಿಧ್ಯಾಸಾಗರ ಸ್ವಾಮಿ, ಪ್ರತಿಮಾ ಸ್ವಾಮಿ, ಆನಂದ ಪಾಟೀಲ, ಅನೀಲ ಚಿಟ್ಟಾ, ಶಿವಕುಮಾರ ಪಾಟೀಲ, ರಾಜಶೇಖರ ನೌಬಾದೆ, ರಾಮು ಅಮಲಾಪುರ, ಮಲ್ಲಿಕಾರ್ಜುನ ವಾಡಿ, ಮಹೇಶ ತೋರಣ, ಮಹೇಶ ದೊಡ್ಡಿ, ಜನಾರ್ದನ ರೆಡ್ಡಿ, ಶಿವಕುಮಾರ, ಶ್ರಿಕಾಂತ, ಸುಂದರ ವಕೀಲ್, ಈರಯ್ರಾ ಸ್ವಾಮಿ, ಮಹೇಶ್ ವಾಡಿ, ಬಸು ಹೇಡೆ, ಅರುಣ ಚಿಟ್ಟಾ, ಶಿವರಾಜ ಚಿಟ್ಟಾ,ನರಸಪ್ಪ ಚಿಟ್ಟಾ, ಧನರಾಜ ಮತ್ತು ಅನೇಕರಿದ್ದರು.