ಕಾಲರಾ: ಮುನ್ನಚ್ಚೆರಿಕೆ ಸಭೆ
ಬೈಲಹೊಂಗಲ 10: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಕಾಲರಾ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳು ಹರುಡುವಿಕೆ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಹೊಟೇಲ್, ಬಾರ್ ಮತ್ತು ರೆಸ್ಟೊರಂಟ್ ಮತ್ತು ಉಪಹಾರ ಗೃಹಗಳ ಮಾಲೀಕರುಗಳ ಸಭೆಯನ್ನು ಪುರಸಭೆಯ ಸಭಾ ಭವನದಲ್ಲಿ ಸೋಮವಾರ ಜರುಗಿತು.
ಮುಖ್ಯಾಧಿಕಾರಿ ವಿರೇಶ ಹಸಬಿ ಮಾತನಾಡಿ, ಬೇಸಿಗೆ ಕಾಲವಾಗಿದ್ದರಿಂದ ಕಲುಷಿತ ನೀರು ಮತ್ತು ಕಲುಷಿತ ಆಹಾರ ಸೇವನೆಯಿಂದ ಕಾಲರಾ, ಇನ್ನೀತರ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಹೊಟೇಲ್, ಬಾರ್ ಮತ್ತು ರೆಸ್ಟೊರಂಟ್ ಮತ್ತು ಉಪಹಾರ ಗೃಹಗಳಲ್ಲಿ ಗ್ರಾಹಕರಿಗೆ ಶುದ್ಧೀಕರಿಸಿದ ನೀರು, ಗುಣಮಟ್ಟದ ಆಹಾರ ಪೂರೈಕೆಗೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದರು.
ಪರೀಶೀಲನೆ ವೇಳೆಯಲ್ಲಿ ಸಾರ್ವಜನಿಕರಿಗೆ ಕಳಪೆ ಆಹಾರ ಮತ್ತು ನೀರು ಪೂರೈಕೆ ಮಾಡುತ್ತಿರುವುದು ಮತ್ತು ಸ್ವಚ್ಛತೆ ಕಾಪಾಡಿಕೊಳ್ಳದೇ ಇರುವುದು ಕಂಡು ಬಂದಲ್ಲಿ ಅಂತಹ ಅಂಗಡಿಗಳ ವ್ಯಾಪಾರ ಪರವಾನಿಗೆ ರದ್ದುಪಡಿಸಿ ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗವುದು ಎಂದರು.
ಈ ಸಂದರ್ಭದಲ್ಲಿ ಕಿರಿಯ ಆರೋಗ್ಯ ನೀರೀಕ್ಷಕ ಸುರೇಶ ಪಾಟೀಲ ಮತ್ತು ಹೊಟೆಲ್, ಬಾರ್ ಮತ್ತು ರೆಸ್ಟೋರೆಂಟ ಮಾಲಕರು ಇದ್ದರು.