ಕ್ಲಾರ್ಕ್ ಹೇಳಿಕೆಗೆ ಲಕ್ಷ್ಮಣ ಕಿಡಿ
ನವದೆಹಲಿ, ಏ.15, ಐಪಿಎಲ್‌ನಲ್ಲಿ ಉತ್ತಮ ಒಪ್ಪಂದ ಕಂಡುಕೊಳ್ಳುವುದ್ದಕ್ಕಾಗಿ ಭಾರತದ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಆಟಗಾರರು ಮೃದುಧೋರಣೆ ತೋರಿಸುತ್ತಿದ್ದಾರೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ನಾಯಕ ಮೈಕೆಲ್ ಕ್ಲಾರ್ಕ್ ಹೇಳಿಕೆ ನೀಡಿದ್ದಕ್ಕೆ, ಭಾರತದ ಮಾಜಿ ಆಟಗಾರ ವಿ.ವಿ.ಎಸ್. ಲಕ್ಷ್ಮಣ್ ಅವರು ಯಾವುದೇ ಭಾರತೀಯ ಆಟಗಾರನೊಂದಿಗೆ ಸ್ನೇಹ ಬೆಳೆಸಿದರೆ, ಒಪ್ಪಂದದ ಮೇಲೆ ಪ್ರಭಾವ ಬೀರುವುದಿಲ್ಲ ಎಂದಿದ್ದಾರೆ.ಕ್ಲಾರ್ಕ್ ಕೆಲವು ದಿನಗಳ ಹಿಂದೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಐಪಿಎಲ್‌ನಲ್ಲಿ ಉತ್ತಮ ಒಪ್ಪಂದಕ್ಕಾಗಿ ಆಸ್ಟ್ರೇಲಿಯಾ ಆಟಗಾರರು ವಿರಾಟ್ ವಿರುದ್ಧದ ಹಿಂದಿನ ಸರಣಿಯಲ್ಲಿ ಮೃದು ಧೋರಣೆ ಹೊಂದಿದ್ದಾರೆ ಮತ್ತು ಅವರನ್ನು ಸ್ಲೆಡ್ಜಿಂಗ್ ಮಾಡಲು ಹೆದರುತ್ತಾರೆ ಎಂದು ಹೇಳಿದ್ದರು. ಸ್ಟಾರ್ ಸ್ಪೋರ್ಟ್ಸ್ ಶೋ ಕ್ರಿಕೆಟ್ ಕನೆಕ್ಟ್‌ನಲ್ಲಿ ಕ್ಲಾರ್ಕ್ ಹೇಳಿಕೆ ನೀಡಿರುವ ಲಕ್ಷ್ಮಣ್, "ಒಬ್ಬ ಆಟಗಾರನೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದರೆ, ನಿಮಗೆ ಐಪಿಎಲ್‌ನಲ್ಲಿ ಸ್ಥಾನ ಲಭಿಸುವುದಿಲ್ಲ. ಎಲ್ಲಾ ಫ್ರಾಂಚೈಸಿಗಳು ಆಟಗಾರರ ಪ್ರತಿಭೆಯನ್ನು ನೋಡುತ್ತಾರೆ ಮತ್ತು ಅವರನ್ನು ತಂಡಕ್ಕೆ ಸೇರಿಸುತ್ತಾರೆ. ಅಂತಹ ಆಟಗಾರರು ಮಾತ್ರ ಐಪಿಎಲ್‌ನಲ್ಲಿ ಸ್ಥಾನ ಪಡೆಯುತ್ತಾರೆ, ಆದ್ದರಿಂದ ನೀವು ಯಾರೊಂದಿಗೂ ಮೃದು ಧೋರಣೆ ಹೊಂದುವ ಮೂಲಕ ಐಪಿಎಲ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಿಲ್ಲ” ಎಂದಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 