ಲಾಕ್‌ಡೌನ್ ಉಲ್ಲಂಘಿಸಿ ಅಪ್ರಾಪ್ತ ಮಗನಿಗೆ ಕಾರು ಚಾಲನೆ ಹೇಳಿಕೊಡುತ್ತಿದ್ದ ಪೋಷಕರಿಗೆ ಕ್ಲಾಸ್
ದೊಡ್ಡಬಳ್ಳಾಪುರ, ಏ.6,ಕೊರೊನಾ ಸೋಂಕು ನಿಯಂತ್ರಣಕ್ಕೆ ಕಡಿವಾಣ ಹಾಕಲುಲಾಕ್ಡೌನ್ ನಿಯಮ ಉಲ್ಲಂಘಿಸಿ ಮನೆಯಿಂದ ಹೊರಬಂದು ಅಪ್ರಾಪ್ತ ಮಗನಿಗೆ ಕಾರು ಚಾಲನೆ ಮಾಡುವುದನ್ನು ಹೇಳಿಕೊಡುತ್ತಿದ್ದ ಪೋಷಕರಿಗೆ ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಡಿ. ಚನ್ನಣ್ಣನವರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದೊಡ್ಡಬಳ್ಳಾಪುರ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಪೋಷಕರು ಅಪ್ರಾಪ್ತ ಮಗನಿಗೆ ಡ್ರೈವಿಂಗ್ ಹೇಳಿ ಕೊಡುತ್ತಿದ್ದುದನ್ನು ಗಮನಿಸಿದ ಎಸ್ಪಿ ರವಿ ಡಿ ಚನ್ನಣ್ಣನವರ್ ನಡು ರಸ್ತೆಯಲ್ಲಿ ಕಾರು ತಡೆದು ತಂದೆ-ತಾಯಿಗೆ ತರಾಟೆ ತೆಗೆದುಕೊಂಡಿದ್ದಾರೆ.ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿರದೇ ಹೊರಗೆ ಬಂದದ್ದು ತಪ್ಪು. ಅದರಲ್ಲೂ ಅಪ್ರಾಪ್ತ ಮಗನಿಗೆ ಕಾರು ಡ್ರೈವಿಂಗ್ ಹೇಳಿ ಕೊಡುತ್ತಿರುವುದು ಕಾನೂನುಬಾಹಿರ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಪ್ರಕರಣ ದಾಖಲಿಸಿ ಕಾರನ್ನು ವಶಕ್ಕೆ ಪಡೆಯುವಂತೆ ಸಿಬ್ಬಂದಿಗೆ ಸೂಚನೆ ನೀಡಿರುವ ಅವರು ಲಾಕ್ ಡೌನ್ ಮುಗಿಯುವವರೆಗೂ ಕಾರು ವಾಪಸ್ಸು ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 