ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್
ಬೆಂಗಳೂರು 20: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
ತನಿಖಾಧಿಕಾರಿ ಎಸ್‌ಪಿ ಉದೇಶ್ ಅವರು, ಇಂದು ಬೆಳಗ್ಗೆ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.82ನೇ ಸಿಟಿ ಸಿವಿಲ್ ಕೋರ್ಟ್ ನ ನ್ಯಾ.ಸಂತೋಷ್ ಗಜಾನನ ಭಟ್ ಅವರ ಮುಂದೆ 11, 000 ಸಾವಿರ ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ.
50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು, 27 ಸಂಪುಟ, 11,000 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್ ಎಂದೇ ಉಲ್ಲೇಖಿಸಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ನೀಡಿದ್ದ ದೂರಿನಲ್ಲಿ ಯಾವುದೇ ಸಾಕ್ಷ್ಯವಿಲ್ಲ ಎಂದು ಲೋಕಾಯುಕ್ತ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಮೊದಲಿನಿಂದಲೂ ಈ ಪ್ರಕರಣದ ಸರಿಯಾಗಿ ತನಿಖೆ ನಡೆಯುತ್ತಿಲ್ಲ ಎಂದು ಹೇಳುತ್ತಿದ್ದೆ, ಈಗ ಸಾಕ್ಷ್ಯಾಧಾರಗಳ ಕೊರತೆ ಎಂದು ಬಿ ರಿಪೋರ್ಟ್ ಹಾಕಲು ಹೊರಟಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಷ್ಟೊಂದು ದಾಖಲೆಗಳಿದ್ದರೂ ಸಾಕ್ಷ್ಯಾಧಾರಗಳ ಕೊರತೆ ಎಂದು ಹೇಳುತ್ತಿರುವುದು ಸರಿಯಲ್ಲ. 10ನೇ ತರಗತಿ ಪಾಸಾದ ನನಗೆ ಕಾನೂನಿನ ಅರಿವಿರುವಷ್ಟು ಲೋಕಾಯುಕ್ತ ಅಧಿಕಾರಿಗಳಿಗೆ ಇಲ್ಲವೇ? ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬವನ್ನು ರಕ್ಷಿಸಲು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಗಿಯುವ ಮುನ್ನವೇ ವರದಿ ಸಲ್ಲಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 