ಹೊನ್ನಾವರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ
ಕಾರವಾರ 22: ಸ್ವಚ್ಛ ಸೇವಾಹಿ2026 ಅಭಿಯಾನದ ಅಂಗವಾಗಿ ಹೊನ್ನಾವರ ರೈಲು ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.ಅಭಿಯಾನದ ಸಂದರ್ಭದಲ್ಲಿ ರೈಲ್ವೆ ಸಿಬ್ಬಂದಿ ಪಾಲ್ಗೊಂಡು ನಿಲ್ದಾಣದ ಪ್ಲಾಟ್‌ಫಾರ್ಮ್‌ಗಳು, ರೈಲು ಹಳಿಗಳ ಸುತ್ತಮುತ್ತಲಿನ ಪ್ರದೇಶ, ನಿಲ್ದಾಣದ ಕಟ್ಟಡದ ಪ್ರವೇಶ ದ್ವಾರ, ರಾ್ಯಂಪ್ ಹಾಗೂ ನಿಲ್ದಾಣದ ಆವರಣವನ್ನು ಸ್ವಚ್ಛಗೊಳಿಸಿದರು. ರೈಲು ನಿಲ್ದಾಣದ ಈ ಸ್ವಚ್ಛತಾ ಕಾರ್ಯಕ್ಕೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಕೊಂಕಣ ರೈಲ್ವೆಯ ಮಂಗಳೂರು ಸಾರ್ವಜನಿಕ ಸಂಪರ್ಕ ವಿಭಾಗದ ವ್ಯವಸ್ಥಾಪಕಿ ಕೆ. ಸುಧಾ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.