ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ

ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ  Cleanliness drive in Kanabaragi village

ಲೋಕದರ್ಶನ ವರದಿ 

ಬೆಳಗಾವಿ 14: ಲಿಂಗರಾಜ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವತಿಯಿಂದ ಮಹಾನಗರ ಪಾಲಿಕೆ ಹಾಗೂ ಯೂತ್ ಫಾರ್ ಸೇವಾ ಸಹಯೋಗದಲ್ಲಿ ಬೆಳಗಾವಿ ಸಮೀಪದ ಕಣಬರಗಿ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನ, ‘ಹಸಿರು ತಿರಂಗಾ’ ಹಾಗೂ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.  

ಕಾರ್ಯಕ್ರಮದಲ್ಲಿ ನೂರಕ್ಕೂ ಹೆಚ್ಚು ಎನ್‌ಎಸ್‌ಎಸ್ ಸ್ವಯಂಸೇವಕ ವಿದ್ಯಾರ್ಥಿಗಳು ಪಾಲ್ಗೊಂಡು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಮನೆಮನೆಗೆ ತೆರಳಿ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.  

ಈ ಸಂದರ್ಭದಲ್ಲಿ ಮಾತನಾಡಿದ ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶಶಿಕಾಂತ್ ಕೊಣ್ಣೂರ, “ಗ್ರಾಮಗಳು ಅಭಿವೃದ್ಧಿಯಾದರೆ ಭಾರತ ಅಭಿವೃದ್ಧಿಯಾಗುತ್ತದೆ. ಗ್ರಾಮಗಳ ಅಭಿವೃದ್ಧಿಗೆ ಪ್ರತಿಯೊಬ್ಬರೂ ಹೆಚ್ಚಿನ ಜವಾಬ್ದಾರಿ ವಹಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.  

ಕಾರ್ಯಕ್ರಮದಲ್ಲಿ ಸಂತೋಷ ಕೋಟೆ, ಮಹಾನಗರ ಪಾಲಿಕೆ ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ದಿನವೀಡೀ ಗ್ರಾಮದಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.