ಗ್ರಾಮಗಳ ಸ್ವಚ್ಛತೆ ಆದ್ಯತೆಯಾಗಲಿ: ಶಶಿಕಾಂತ ಶಿವಪೂರೆ
Cleanliness of villages should be a priority: Shashikant Shivapure
ಬಳ್ಳಾರಿ 01: ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಲು ಘನ ತಾಜ್ಯ ನಿರ್ವಹಣಾ ಘಟಕದ ವಾಹನ ಚಾಲಕರು ಮತ್ತು ಸಹಾಯಕ ಮಹಿಳಾ ಸದಸ್ಯರ ಪಾತ್ರ ಪ್ರಮುಖವಾಗಿದ್ದು, ಸ್ವಚ್ಛತಾ ಕಾರ್ಯ ಆದ್ಯತೆಯಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಹೇಳಿದರು.ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು ಮತ್ತು ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಬೆಂಗಳೂರು, ಕಿತ್ತೂರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘ ಹರಪನಹಳ್ಳಿ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಘನ ತಾಜ್ಯ ನಿರ್ವಹಣಾ ಘಟಕದಲ್ಲಿನ ವಾಹನ ಚಾಲಕರಿಗೆ ಹಾಗೂ ಸಹಾಯಕರಾದ ಮಹಿಳಾ ಸದಸ್ಯರಿಗೆ ಜಿಲ್ಲಾ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಮೂರು ದಿನದ ವಸತಿ ಸಹಿತ ಪುನಶ್ಚೇತನ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.
ವೈಜ್ಞಾನಿಕ ಘನತಾಜ್ಯ ನಿರ್ವಹಣೆ ಮಾಡುವುದರ ಬಗ್ಗೆ ಅರಿವು ಹೊಂದಬೇಕು. ಜೊತೆಗೆ ತೆರಿಗೆ ವಸೂಲಾತಿ ಮಾಡಿ ಹೆಚ್ಚಿನ ಆದಾಯ ಪಡೆಯುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕ ವಿಜಯ್ ಕುಮಾರ್ ಪಿ., ಸಂಪನ್ಮೂಲ ವ್ಯಕ್ತಿಗಳಾದ ಗಣೇಶ್, ಬಳ್ಳಾರಿ ಮತ್ತು ಸಂಡೂರು ತಾಲ್ಲೂಕಿನ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಗಂಗಾಧರ, ಸೋಮಶೇಖರ್.ಕೆ., ಹಾಗೂ ವಲಯ ಮೇಲ್ವಿಚಾರಕ ಗಂಗಾಧರ ಸ್ವಾಮಿ ಸೇರಿದಂತೆ ಜಿಲ್ಲಾ ಪಂಚಾಯತ್ ನ ಸಿಬ್ಬಂದಿ, ಬಳ್ಳಾರಿ ಮತ್ತು ಸಂಡೂರು ತಾಲ್ಲೂಕಿನ ವಾಹನ ಚಾಲಕರು ಹಾಗೂ ಸಹಾಯಕರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 