ರಾಣೆಬೆನ್ನೂರ

ಮಹಿಳಾ ಮೋರ್ಚಾ ಪದಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ಮಹಿಳಾ ಮೋರ್ಚಾ ಪದಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯಕ್ರಮ

ರಾಣೇಬೆನ್ನೂರು 26: ನಗರದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ವತಿಯಿಂದ ಸ್ವಚ್ಚತಾ ಸೇವಾ ಪಾಕ್ಷಿಕ ಅಂಗವಾಗಿ  ನಗರದ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ  ಶಾಲೆ ನಂ7ರ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಹಿಳಾ ಮೋರ್ಚಾದ ಪದಾಧಿಕಾರಿಗಳು, ಸಾಮೋಹಿಕವಾಗಿ, ಆವರಣವನ್ನು ಸ್ವಚ್ಛಗೊಳಿಸಿದರು.ಈ ಸಂದರ್ಭದಲ್ಲಿ ನಗರ ಮಹಿಳಾ ಮೋರ್ಚಾದ ಅಧ್ಯಕ್ಷ ಶ್ರೀಮತಿ  ಸುಜಾತಾ ಆರಾಧ್ಯಮಠ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಕ್ಷತಾ ಮಾಳಿಗಿಮನಿ,  ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಮತಾ ಕಟ್ಟಪ್ಪನವರ್, ಸೇರಿದಂತೆ ಮಹಿಳಾ ಮೋರ್ಚಾದ ಮತ್ತು ಹಾವೇರಿ ಜಿಲ್ಲಾ ಕಾರ್ಯಕಾರಿಣಿಯ ಸದಸ್ಯರಾದ ಶ್ರೀಮತಿ ನೀಲಾಂಬಿಕ ನಿಡುಗುಂದಿ, ಮತ್ತು ಪದಾಧಿಕಾರಿಗಳು, ಸದಸ್ಯರು ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ