ಕಾರವಾರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ
Cleanup program at Karwar beach
ಲೋಕದರ್ಶನ ವರದಿ
ಕಾರವಾರ, ಜೂ.2 :- ವಿಶ್ವ ಪರಿಸರ ದಿನಾಚರಣೆ 2026 ರ ಪ್ರಯುಕ್ತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ನಗರಸಭೆ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ ಕಾರವಾರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಪರಿಸರದ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲಾಯಿತು. ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಕಡಲ ತೀರದಲ್ಲಿ ಕಸವನ್ನು ಎಲ್ಲೆಂದರಲ್ಲಿ ಹಾಕದೇ ಕೇವಲ ಕಸ ಸಂಗ್ರಹಣಾ ತೊಟ್ಟಿಗಳಲ್ಲಿ ಹಾಕಲು ಜಾಗೃತಿ ಮೂಡಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜಿ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಿಬ್ಬಂದಿಗಳು, ಗ್ರಾಸಿಮ್ ಇಂಡಸ್ಟ್ರೀಸ್ ಲಿ. ಬಿಣಗಾ ಕೈಗಾರಿಕೆಯ ಅಧಿಕಾರಿ ವಿಕ್ರಮ್ ಮಣಿ ಹಾಗೂ ಕಾರ್ಮಿಕರು ಉಪಸ್ಥಿತರಿದ್ದು, ಕಡಲ ತೀರದ ಸ್ವಚ್ಛತೆಯನ್ನು ಕೈಗೊಂಡು, ಸ್ವಚ್ಛತಾ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 