ಡೆಹ್ರಾಡೂನ್ ನಲ್ಲಿ ಮೇಘಸ್ಫೋಟ: ನೀರಿನ ರಭಸಕ್ಕೆ ಕೊಚ್ಚಿಹೋದ ಮನೆ, ಅಂಗಡಿ-ಮುಂಗಟ್ಟು
Cloudburst in Dehradun: House, shop and store washed away by water
ಡೆಹ್ರಾಡೂನ್: ಭಾರೀ ಮೇಘಸ್ಫೋಟದಿಂದಾಗಿ ಮನೆಗಳು, ಕಾರು, ಅಂಗಡಿ ಮುಂಗಟ್ಟು ಕೊಚ್ಚಿಕೊಂಡು ಹೋಗಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದ್ದು, ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆಗೆ ಸೇತುವೆಗಳು ಹಾನಿಗೊಂಡಿದ್ದು, ಸಹಸ್ರಧಾರ ಮತ್ತು ಐಟಿ ಪಾರ್ಕ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಮೇಘಸ್ಫೋಟದಿಂದ ಕಾರ್ಲಿಗಾಡ್ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.
ನಿರಂತರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಮುಖ್ಯ ಸೇತುವೆಯೊಂದು ಕುಸಿದು ಬಿದ್ದಿದ್ದು, ನದಿ ಪ್ರದೇಶದ ಸುತ್ತಮುತ್ತ ಅಪಾರ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಮೇಘ ಸ್ಫೋಟದಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ನೂರಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಪುಷ್ಕರ್ ಅವರಿಗೆ ಕರೆ ಮಾಡಿ, ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 