ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
Cochlear implant surgery successful
ವಿಜಯಪುರ 30: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ.. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದ ಕಿವಿ, ಮೂಗು ಹಾಗೂ ಗಂಟಲು ವಿಭಾಗದಲ್ಲಿ ಶುಕ್ರವಾರ ಅತ್ಯಾಧುನಿಕ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಸುಮಾರು ಒಂದು ವರ್ಷ ಏಳು ತಿಂಗಳ ಜನ್ಮಜಾತ ಕಿವುಡುತನ ಹೊಂದಿರುವ ಮಗುವಿಗೆ ಅತ್ಯಾಧುನಿಕ ನೆಕ್ಸಾ ಕಾಕ್ಲಿಯರ್ ಇಂಪ್ಲಾಂಟ್ ಉಪಕರಣವನ್ನು ಒಳಕಿವಿಯ ಭಾಗದಲ್ಲಿ ಅಳವಡಿಸಲಾಯಿತು. ಈ ಉಪಕರಣವು ಮಾತನಾಡುವ ಧ್ವನಿಗಳನ್ನು ವಿದ್ಯುತ್ ಪ್ರೇರಣೆಯಾಗಿ ಪರಿವರ್ತಿಸಿ, ಕಿವಿಯ ನರಗಳನ್ನು ಉತ್ತೇಜಿಸುವ ಮೂಲಕ ಮೆದುಳಿಗೆ ಸಂದೇಶಗಳನ್ನು ಕಳುಹಿಸಿ, ಪದಗಳನ್ನು ಸ್ಪಷ್ಟವಾಗಿ ಕೇಳಿಸಿಸುವ ಸಾಮರ್ಥ್ಯವನ್ನು ಹೊಂದಿದೆ.
ಈ ಶಸ್ತ್ರಚಿಕಿತ್ಸೆಯಲ್ಲಿ ಬಳಸಲಾದ ಸ್ಮಾರ್ಟ್ ನಾವ್ತಂ ತ್ರಜ್ಞಾನವು ಮೊಬೈಲ್ ಜೊತೆ ನೇರ ಸಂಪರ್ಕ ಹೊಂದಿದ್ದು, ಡೈರೆಕ್ಟ್ ಸ್ಟ್ರೀಮಿಂಗ್ ಮತ್ತು ಟ್ರ್ಯಕಿಂಗ್ ಸೌಲಭ್ಯವನ್ನು ಒದಗಿಸುತ್ತದೆ. ಈ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಉತ್ತರ ಕರ್ನಾಟಕ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ನಡೆದಿರುವುದು ವಿಶೇಷವಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ, ಕಳೆದ ಎರಡು ವರ್ಷಗಳಿಂದ ಆಸ್ಪತ್ರೆಯಲ್ಲಿ ಈ ರೀತಿಯ ಚಿಕಿತ್ಸೆಗಳು ನಡೆಯುತ್ತಿದ್ದು, ಚಿಕಿತ್ಸೆ ಪಡೆದ ಮಕ್ಕಳು ವಾಕ್ ಮತ್ತು ಶ್ರವಣ ತಜ್ಞರಿಂದ ತರಬೇತಿ ಪಡೆದು ಸಾಮಾನ್ಯ ಮಕ್ಕಳಂತೆ ಮಾತನಾಡಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು. ವೈದ್ಯಕೀಯ ಮಹವಿದ್ಯಾಲಯದ ಪ್ರಾಚಾರ್ಯೆ ಮತ್ತು ತಜ್ಞವೈದ್ಯೆ ಡಾ. ತೇಜಸ್ವಿನಿ ವಲ್ಲಭ ಮಾತನಾಡಿ, ಜನ್ಮಜಾತ ಕಿವುಡುತನ ಹೊಂದಿರುವ ಮಕ್ಕಳಿಗೆ ಎರಡು ವರ್ಷದೊಳಗೆ ಚಿಕಿತ್ಸೆ ನೀಡಿದರೆ ಅವರು ಇತರ ಮಕ್ಕಳಂತೆ ಶಿಕ್ಷಣ ಪಡೆದು ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯವಾಗುತ್ತಠ. ಮೂರು ವರ್ಷಗಳ ನಂತರ ಚಿಕಿತ್ಸೆ ಹೆಚ್ಚು ಪರಿಣಾಮಕಾರಿಯಾಗುವುದಿಲ್ಲ ಎಂದು ಹೇಳಿದರು.
ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆಗಳ ಸಂಯೋಜಕಿ ಡಾ. ಎಚ್. ಟಿ. ಲತಾದೇವಿ ಮಾತನಾಡಿ, ಪ್ರತಿಯೊಂದು ಮಗುವಿಗೂ ಶ್ರವಣ ದೋಷ ತಪಾಸಣೆ ಅಗತ್ಯವಾಗಿದ್ದು, ಪ್ರಾಥಮಿಕ ಹಂತದಲ್ಲಿಯೇ ದೋಷ ಪತ್ತೆಯಾದರೆ ತಕ್ಷಣ ಚಿಕಿತ್ಸೆ ಆರಂಭಿಸುವುದು ಅತ್ಯಂತ ಮುಖ್ಯವಾಗಿದೆ. ಶ್ರವಣ ದೋಷ ಕಂಡುಬಂದ ಮಕ್ಕಳಿಗೆ ಆರಂಭದಲ್ಲೇ ಹಿಯರಿಂಗ್ ಏಡ್ ಬಳಕೆ ಮಾಡಿಸಿ, ಅಗತ್ಯವಿದ್ದಲ್ಲಿ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ ಮಾಡಿಸಬೇಕು. ನಂತರ ಎರಡರಿಂದ ಮೂರು ವರ್ಷಗಳವರೆಗೆ ವಾಕ್ ಮತ್ತು ಶ್ರವಣ ತಜ್ಞರಿಂದ ತರಬೇತಿ ನೀಡುವುದು ಅಗತ್ಯವಾಗಿದ್ದು, ಈ ಎಲ್ಲಾ ಸೌಲಭ್ಯಗಳು ಆಸ್ಪತ್ರೆಯ ಕಿವಿ, ಮೂಗು ಹಾಗೂ ಗಂಟಲು ವಿಭಾಗದಲ್ಲಿ ಲಭ್ಯವಿವೆ ಎಂದು ಅವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಎಸ್. ಎನ್. ಬೆಂಟೂರ, ಆಸ್ಪತ್ರೆಯ ವೈದ್ಯಕೀಯ ಉಪಅಧೀಕ್ಷಕ, ಡಾ. ರವಿಕುಮಾರ ಬಿರಾದಾರ ಸೇರಿದಂತೆ ನಾನಾ ವೈದ್ಯರು ಮತ್ತು ಮಗುವಿನ ಪೋಷಕರು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 