ಚಂಡಮಾರುತ ಅಣುಕು ಕಾರ್ಯಾಚರಣೆಗೆ ಜಿಲ್ಲಾಧಿಕಾರಿ ಸೂಚನೆ
Collector's notice for storm nuclear operation
ಲೋಕದರ್ಶನ ವರದಿ
ಕಾರವಾರ 25: ಅಕ್ಟೋಬರ್ 1ರಂದು ಜಿಲ್ಲೆಯಲ್ಲಿ ನಡೆಯಲಿರುವ ಅಂತಾರಾಜ್ಯ ಮಟ್ಟದ ಚಂಡಮಾರುತ ವಿಪತ್ತು ನಿರ್ವಹಣೆ ಅಣುಕು ಕಾರ್ಯಾಚರಣೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ನಿರ್ದೇಶನದಂತೆ ಅಣುಕು ಕಾರ್ಯಾಚರಣೆ ನಡೆಯಲಿದೆ ಎಂದರು.
ಕಾರವಾರದ ಕ್ರಿಮ್ಸ್ ಆಸ್ಪತ್ರೆ, ಕುಮಟಾ ಬಸ್ ನಿಲ್ದಾಣ, ಹೊನ್ನಾವರದ ಕಾಸರಕೋಡು ಹಿನ್ನೀರಿನ ಪ್ರದೇಶ, ಮುರುಡೇಶ್ವರ ಬೀಚ್, ತದಡಿ ಬಂದರು ಹಾಗೂ ಅಂಕೋಲಾ ರೈಲ್ವೆ ನಿಲ್ದಾಣಗಳಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸಲಾಗುವುದು. ಕಾರ್ಯಾಚರಣೆ ವೇಳೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದರು. ಸಾರ್ವಜನಿಕರ ರಕ್ಷಣೆ, ಸ್ಥಳಾಂತರ, ಪುನರ್ವಸತಿ ಹಾಗೂ ವೈದ್ಯಕೀಯ ನೆರವಿಗೆ ಅಗತ್ಯ ಸ್ಥಳ ಮತ್ತು ಸಂಪನ್ಮೂಲಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆಪದ್ ಮಿತ್ರರು ಹಾಗೂ ಸ್ವಯಂಸೇವಾ ಸಂಘಟನೆಗಳ ನೆರವು ಪಡೆದು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಕಂದಾಯ, ಪೊಲೀಸ್, ಅಗ್ನಿಶಾಮಕ ಸೇರಿದಂತೆ 34 ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ಸ್ಥಳಕ್ಕೆ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರನ್ನು ಇನ್ಸಿಡೆಂಟ್ ಕಮಾಂಡರ್ಗಳಾಗಿ ನೇಮಿಸಲಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಶೇಷ ವೀಕ್ಷಕರು ಕಾರ್ಯಾಚರಣೆಯನ್ನು ಪರೀಶೀಲಿಸಲಿದ್ದಾರೆ. ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 