ಜಿಲ್ಲಾ ಮಟ್ಟದ ದಸರಾ ಕಬಡ್ಡಿ ಗೆದ್ದ ಮಹಾವಿದ್ಯಾಲಯದ ಮಹಿಳಾ ತಂಡ
College women's team wins district-level Dasara Kabaddi tournament
ಲೋಕದರ್ಶನ ವರದಿ
ಬಾಗಲಕೋಟೆ 26: ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಮಹಿಳೆಯರ ಕಬಡ್ಡಿ ಕ್ರೀಡಾಕೂಟದಲ್ಲಿ ಬಸವೇಶ್ವರ ಕಲಾ ಮಹಾವಿದ್ಯಾಲಯದ ಮಹಿಳಾ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿದೆ.
ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಂದು ತಂಡದಂತೆ ಒಟ್ಟು 10 ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ರೋಚಕವಾಗಿ ನಡೆದ ಅಂತಿಮ ಪಂದ್ಯದಲ್ಲಿ ಬೀಳಗಿ ತಾಲೂಕಿನ ತೊಳಮಟ್ಟಿ ಗ್ರಾಮದ ತಂಡವನ್ನು 28-12 ಅಂತರದಿಂದ ಸೋಲಿಸುವ ಮೂಲಕ ಬಸವೇಶ್ವರ ಕಲಾ ಮಹಾವಿದ್ಯಾಲಯದ ತಂಡ ವಿಜಯದ ಕೀರೀಟ ಮುಡಿಗೇರಿಸಿಕೊಂಡಿದೆ.
ಮುಂಬರುವ ದಿನಗಳಲ್ಲಿ ಉತ್ತರ ಕನ್ನಡದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ಸೆಣಸಾಡಲಿದೆ. ಈ ಹಿಂದೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲೂ ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿತ್ತು.
ಸಾಧನೆಗೈದ ಕ್ರೀಡಾಪಟುಗಳಿಗೆ ಬಿವ್ಹಿವ್ಹಿ ಸಂಘದ ಕಾರ್ಯಾಧ್ಯಕ್ಷರಾದ ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿಗಳಾದ ಮಹೇಶ್.ಎನ್.ಅಥಣಿ, ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಗುರುಬಸವ ಸೂಳಿಭಾವಿ, ಪ್ರಾಚಾರ್ಯರಾದ ಎಸ್. ಆರ್. ಮುಗನೂರಮಠ, ದೈಹಿಕ ಶಿಕ್ಷಣ ನಿರ್ದೇಶಕರಾದ ಎಮ್.ಎಮ್ ದೇವನಾಳ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 