ಬೆಳಗಾವಿ. ದಕ್ಷಿಣ ಭಾರತ ಜೈನ ಸಭೆಯ ಸಂಸ್ಥಾಪಕರಲ್ಲಿ ಒಬ್ಬರಾದ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವರಾದ ದಿವಾನಬಹಾದ್ದರೂ ಅಣ್ಣಾಸಾಹೇಬ ಲಠ್ಠೆ ಅವರ 75 ನೇ ಪುಣ್ಯಸ್ಮರಣೆ ಕಾರ್ಯಕ್ರಮ ಮೇ 16 ರಂದು ಬೆಳಿಗ್ಗೆ 7-30 ಗಂಟೆಗೆ ಮಾಣಿಕಬಾಗ ದಿಗಂಬರ ಜೈನ ಬೋರ್ಡಿಂಗನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಬೆಳಗಾವಿ ಜೈನ ಸಮಾಜದ ಗಣ್ಯರು ಹಾಗೂ ಲಠ್ಠೆ ಪರಿವಾರದ ಸದಸ್ಯರು ಆಗಮಿಸಲಿದ್ದು, ಈ ಕಾರ್ಯಕ್ರಮಕ್ಕೆ ಸಮಾಜ ಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರಬೇಕೆಂದು ಆಯೋಜಕರು ಕೋರಿದ್ದಾರೆ.