ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆ
Commemoration of Dr. Babu Jagjivan Ram's death anniversary
ತಾಳಿಕೋಟಿ 06 : ಹಸಿರು ಕ್ರಾಂತಿಯ ಹರಿಕಾರ, ದೇಶ ಕಂಡ ಶ್ರೇಷ್ಠ ನಾಯಕ, ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನ ರಾಮ್ ಅವರ 40ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮವನ್ನು ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಯಿತು. ತಹಶೀಲ್ದಾರ ಡಾ.ವಿನಯಾ ಹೂಗಾರ ಹಾಗೂ ಕಾರ್ಯಕ್ರಮದ ಅಧ್ಯಕ್ಷರಾದ ಯಮನಪ್ಪ ಕಟ್ಟಿಮನಿ ಅವರು ದೀಪ ಪ್ರಜ್ವಲನೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಮಹಾನಾಯಕನಿಗೆ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಸಿಲ್ದಾರ್ ಡಾ.ವಿನಯಾ ಹೂಗಾರ ಅವರು ತಮ್ಮ ನುಡಿ ನಮನಗಳಲ್ಲಿ ಭಾರತದ ಮಾಜಿ ಉಪ ಪ್ರಧಾನಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರಾದ ಡಾ.ಬಾಬು ಜಗಜೀನ್ ರಾಮ್ ಅವರು ಬಿಟ್ಟುಹೋದ ಬದುಕಿನ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಲ್ಲಪ್ಪ ಶಿರೋಳ, ಪರಶುರಾಮ ಹೋಟಗಾರ, ದ್ಯಾಮಣ್ಣ ಸೋಮನಾಳ, ಬಸ್ಸು ಕಟ್ಟಿಮನಿ, ರಮೇಶ್ ಮಾದರ, ಕಾಶಿನಾಥ ಕಟ್ಟಿಮನಿ, ರಮೇಶ್ ದೋಡಮನಿ, ಹುಲಗಪ್ಪ ಕಟ್ಟಿಮನಿ, ಆಸೀಫ್ ಕೆಂಭಾವಿ, ಮಡು ಚಲವಾದಿ, ಗೋಪಾಲ ಕಟ್ಟಿಮನಿ, ಶೇಖಪ್ಪ ಕಾರಗಾನೂರ ಹಾಗೂ ತಹಶೀಲ್ದಾರರ ಕಚೇರಿ ಸಿಬ್ಬಂದಿಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ 