ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಕೋರಿದ ಆಯೋಗ
Gram Panchayat Elections
ಬೆಂಗಳೂರು,
ಮೇ 22-ಜೂನ್ ನಿಂದ ಆಗಸ್ಟ್ ಅವಧಿಯಲ್ಲಿ ರಾಜ್ಯದ ೫೮೦೦ ಗ್ರಾಮ ಪಂಚಾಯಿತಿಗಳ ಅವಧಿ
ಮುಕ್ತಾಯವಾಗುತ್ತಿರುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕಾಲ
ಪಕ್ವವಾಗಿದೆಯೇ ಎನ್ನುವ ಕುರಿತು ರಾಜ್ಯ ಚುನಾವಣಾ ಆಯೋಗ ಅಭಿಪ್ರಾಯ ಸಂಗ್ರಹಕ್ಕೆ
ಮುಂದಾಗಿದೆ.
ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಆಯೋಗ,
ಕೋವಿಡ್19 ಲಾಕ್ ಡೌನ್ ಹಿನ್ನೆಲೆಯಲ್ಲಿ ಚುನಾವಣೆ ನಡೆಸಬೇಕೆ ಅಥವಾ ಬೇಡವೇ ಎನ್ನುವ
ಕುರಿತು ತಮ್ಮ ಅಭಿಪ್ರಾಯ ನೀಡುವಂತೆ ಕೇಳಿದೆ.
ಕೊವೀಡ್ 19 ನಿಂದಾಗಿ ವಿಧಿಸಿರುವ
ಹಲವು ನಿರ್ಬಂಧಗಳ ನಡುವೆ ಮತದಾರರ ಪಟ್ಟಿ ಪರಿಷ್ಕರಣೆ, ಕ್ಷೇತ್ರ ಪುನರ್ ವಿಂಗಡಣೆ,
ಸ್ಥಾನ ಮೀಸಲಾತಿ ತಿದ್ದುಪಡಿ ನಿಗಿದಿಪಡಿಸುವುದು ಸೇರಿದಂತೆ ಚುನಾವಣಾ ತಯಾರಿ ನಡೆಸಲು
ಸಾಧ್ಯವಿದೆಯೇ ಎನ್ನುವ ಕುರಿತು ಇ ಮೇಲ್ ಮೂಲಕ ಜಿಲ್ಲಾಡಳಿತದ ಅಭಿಪ್ರಾಯ ದಾಖಲಿಸುವಂತೆ
ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 